ಕರೋನದಿಂದ ಸರ್ಕಾರಿ ವೈಫಲ್ಯ ಮರೆಮಾಡಲು ವೈದ್ಯರ ಮೇಲೆ ಗೂಬೆ ಕೂಡಿಸುತ್ತಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಸ್ಟ್ರೈಕೆ ಆರಂಭಿಸಿದ ವೈದ್ಯ ವೃಂದ!!

0
124

ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಇಂದಿನಿಂದ ಆರೋಗ್ಯ ಇಲಾಖೆಯ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಇದೀಗ ಈ ವಿಚಾರ ಸರ್ಕಾರಕ್ಕೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಮಿಣಿಸಿದೆ. ಅಲ್ಲದೆ ಸರ್ಕಾರ ಬೇಡಿಕೆಗಳನ್ನು ಒಪ್ಪಿಕೊಳ್ಳದೆ ಇದ್ದರೆ ಸೆಪ್ಟೆಂಬರ್ 21 ರಿಂದ ಓಪಿಡಿಗಳನ್ನು ಬಂದ್ ಮಾಡುವುದಾಗಿ ಹೋರಾಟ ನಿರತ ವೈದ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ವಿರುದ್ದ ಅಸಹಕಾರ ತೋರಿರುವ ವೈದ್ಯರು ಇಂದಿನಿಂದ ಸರ್ಕಾರಕ್ಕೆ ಕೊರೊನಾ ಸೋಂಕಿನ ಅಂಕಿ ಅಂಶಗಳು, ಬೇರೆ ರೋಗಿಗಳ ಅಂಕಿ ಅಂಶ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಅಂಕಿ ಅಂಶಗಳನ್ನು ನೀಡದೇ ಇರುವಂತೆ ಹೋರಾಟಗಾರರು ತೀರ್ಮಾನ ಮಾಡಿದ್ದಾರೆ. ಒಂದು ವಾರದೊಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆ ಬಂದ್ ಮಾಡುತ್ತೇವೆ. ಕೇವಲ ಎಮರ್ಜೆನ್ಸಿ ಮಾತ್ರ ಓಪನ್ ಇರಲಿದೆ ಅನ್ನೋ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ಡಾ.ಜಿ.ಎ ಶ್ರೀನಿವಾಸ್, ಸಾರ್ವಜನಿಕರ ಹಿತದೃಷ್ಠಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಸೆಪ್ಟೆಂಬರ್ 20 ರವರೆಗೂ ಸಮಯಾವಕಾಶ ನೀಡುತ್ತೇವೆ. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಒಪ್ಪದೆ ಹೋದರೆ ಸೆಪ್ಟೆಂಬರ್ 21 ರಿಂದ ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನೂ ನಮ್ಮ ಸಂಘಟನೆಯ ತೀರ್ಮಾನದಂತೆ ಸೋಮವಾರ ಎಲ್ಲ ಜಿಲ್ಲಾಧಿಕಾರಿಗಳು ಸೇರಿದಂತೆ ರಾಜ್ಯ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಾವೇದ್ ಆಖ್ತರ್ ಅವರಿಗೂ ಮನವಿ ನೀಡಲಾಗಿದೆ. ಮಂಗಳವಾರದಿಂದ ಅಸಹಕಾರ ಚಳುವಳಿ ಪ್ರಾರಂಭಿಸಿದ್ದೇವೆ. ಜೊತೆಗೆ ಸರ್ಕಾರ ನಡೆಯುವ ಯಾವುದೇ ಸಭೆಗೂ ಹಾಜರಾಗುವುದಿಲ್ಲ ಎಂದು ಡಾ. ಜಿ.ಏ ಶ್ರೀನಿವಾಸ್ ಹೇಳಿದ್ದಾರೆ.

ಐಎಎಸ್ ಅಧಿಕಾರಿಗಳ ತಮ್ಮನ್ನು ಮುಕ್ತ ಮಾಡಬೇಕು. ನಂಜನಗೂಡು ಆಸ್ಪತ್ರೆ ವೈದ್ಯರ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವೇತನ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ರಾಜ್ಯ ವೈದ್ಯಕೀಯ ಸಂಘ ಸರ್ಕಾರದ ಮುಂದೆ ಇಟ್ಟಿದೆ. ಇಂದಿನಿಂದ ಒಂದು ವಾರದ ಒಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆಗಳನ್ನು ಕ್ಲೋಸ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಅಲ್ಲದೇ ಸೆಪ್ಟೆಂಬರ್ 21 ರಿಂದ ಬೆಂಗಳೂರು ಚಲೋ ಆರಂಭ ಮಾಡಲಿದ್ದಾರೆ. ಬೆಂಗಳೂರು ಚಲೋ ಆರಂಭ ಮಾಡಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ.

Also read: ಠಾಣೆಯಲ್ಲಿ ತುಕ್ಕು ಹಿಡಿದ ವಾಹನಗಳಲ್ಲೇ ತರಕಾರಿ ಸೊಪ್ಪು ಬೆಳೆಯುತ್ತಿರುವ ಪೊಲೀಸರು