ಬಿಗ್ ಬ್ರೇಕಿಂಗ್; ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮುಕ್ತಿ, ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್’ ಎಷ್ಟೊಂದು ಕಡಿತ ಇಲ್ಲಿದೆ ನೋಡಿ ಮಾಹಿತಿ .!

0
261

ಕೇಂದ್ರ ಸರ್ಕಾರದ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಒಂದೇ ವಾರದಲ್ಲಿ ಜನರಿಗೆ ಸಾಕಷ್ಟು ಸಂಕಷ್ಟ ತಂದಿದ್ದು, ದಂಡ ಕಟ್ಟುವಲ್ಲಿ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿರುವುದು ಕಂಡು ಬಂದಿತ್ತು, ಅದರಂತೆ ಈ ಸಂಚಾರಿ ನಿಯಮಕ್ಕೆ ಭಾರಿ ವಿರೋಧಗಳು ಕೇಳಿ ಬಂದಿದ್ದವು, ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಾಹನ ಸವಾರರ ಕಣ್ಣಿರು ವರಿಸಲು ಮುಂದಾಗಿ ದಂಡ ಮೊತ್ತ ಕಡಿಮೆ ಮಾಡಲು ಸಾರಿಗೆ ಇಲಾಖೆ ಚಿಂತನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು. ಜನರು ಸ್ವಲ್ಪ ನಿರಾಳವಾಗಿದ್ದಾರೆ.

Also read: ದೇಶದಲ್ಲಿ ಆಟೋಮೊಬೈಲ್ ವಲಯ ಕುಸಿಯಲು ಯುವಪೀಳಿಗೆ ಓಲಾ, ಉಬರ್, ಮೆಟ್ರೋ ಬಳಸುವುದೇ ಕಾರಣವೆಂದ ನಿರ್ಮಲಾ ಸೀತಾರಾಮನ್.!

ಹೌದು ಕಳೆದು ಒಂದು ವಾರದಿಂದ ವಾಹನ ಚಾಲಕರಿಗೆ ಸಾವಿರದಿಂದ ಲಕ್ಷದವರೆಗೆ ದಂಡ ವಿಧಿಸಿದ ಉದಾಹರಣೆಗಳು ಕಂಡು ಬರುತ್ತಿವೆ. ಇದೆ ಮಾದರಿ ರಾಜ್ಯದಲ್ಲಿ ಮುಂದುವರೆದರೆ ಜನರು ದುಡಿದ ಹಣವನ್ನು ಪೊಲೀಸರ ಕೈಯಲ್ಲಿಟ್ಟು ಬರಬೇಕಾಗಿತ್ತು. ಈಗಾಗಲೇ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ. ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರವೂ ಈ ಕುರಿತು ಗಂಭೀರವಾದ ಚಿಂತನೆ ನಡೆಸಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದಂಡ ಮೊತ್ತ ಕಡಿಮೆ ಮಾಡಿ ಎಂದು ಸರ್ಕಾರವನ್ನು ಆಗ್ರಹಿಸಿದ್ದರು.

Also read: ಮಹಿಳಾ ಪೌರ ಕಾರ್ಮಿಕರೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸ ಬೇರ್ಪಡಿಸಿದ ಪ್ರಧಾನಿ ಮೋದಿ; ಮುಂದೇನು ಮಾಡಿದರು ನೋಡಿ..!

ನಡುವೆಯೇ ಗುಜರಾತ್ ಹಾಗೂ ಮಹಾರಾಷ್ಟ್ರ ಸರ್ಕಾರಗಳು ದಂಡದ ಮೊತ್ತವನ್ನು ಕಡಿಮೆ ಮಾಡಿದ್ದವು. ಸದ್ಯ ಕರ್ನಾಟಕದಲ್ಲೂ ದಂಡದ ಪ್ರಮಾಣ ಕಡಿಮೆ ಮಾಡಲು ಸಿಎಂ ಬಿಎಸ್‍ವೈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದ್ದಾರೆ.

Also read: ರೈತರು, ಕೂಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಹೊಸ ಯೋಜನೆ; ಇನ್ಮುಂದೆ ಮನೆ ಬಾಗಿಲಿಗೆ ಬರಲಿವೆ ಹಲವು ಸರ್ಕಾರಿ ಸೇವೆಗಳು.!

ಎಷ್ಟು ಕಡಿಮೆಯಾಗಲಿದೆ ದಂಡ?

ಸಾರಿಗೆ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿಯೇ ಸಭೆ ನಡೆಸಲಿದ್ದು ದಂಡ ಶುಲ್ಕವನ್ನು ಎಷ್ಟು ಕಡಿಮೆ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ. ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ದಂಡ ಕಡಿತ ಮಾಡಲಿದೆ.