ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
478

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 119 ನಿರ್ದೇಶಕರು,ಎಕ್ಸಿಕ್ಯುಟಿವ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 31 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ವಾಯುಪಡೆಯು ಗ್ರೂಪ್ Y ಹುದ್ದೆಗಳಿಗೆ ಜುಲೈ 17, 19 ಮತ್ತು 21 ರಂದು ರ್ಯಾಲಿ ಇಂದೇ ಅರ್ಜಿ ಸಲ್ಲಿಸಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನಿರ್ದೇಶಕರು,ಎಕ್ಸಿಕ್ಯುಟಿವ್ ಮತ್ತು ಸಹಾಯಕ

ಸಂಸ್ಥೆ (Organisation): ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ

ವಿದ್ಯಾರ್ಹತೆ (Educational Qualification): ಬಿ.ಇ/ಬಿ.ಟೆಕ್ ,ಎಂಎಸ್,ಎಂಬಿಎ,ಸ್ನಾತಕೋತ್ತರ ಪದವಿ,ಸಿಎ,ಎಂ.ಕಾಂ,ಬಿ.ಎಸ್ಸಿ,ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಅಧಿಕೃತ ವೆಬ್‌ಸೈಟ್‌ http://www.kvic.org.in/kvicres/index.php ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2019ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://www.kvic.org.in/kvicres/index.php ಕ್ಲಿಕ್ ಮಾಡಿ.