‘ಥಗ್ಸ್ ಆಫ್ ಮಾಲ್ಗುಡಿ’ ಎಂದ ಕಿಚ್ಚ ಮತ್ತು ರಕ್ಷಿತ್ ಶೆಟ್ಟಿ…

0
1024

ಕಿಚ್ಚ ಸುದೀಪ್ ಮತ್ತು ರಕ್ಷಿತ್ ಶೆಟ್ಟಿ ಒಬ್ಬರನ್ನೊಬ್ಬರು ಕಾಲೆಳೆಯುವಷ್ಟು ಆತ್ಮೀಯ ಸ್ನೇಹಿತರು ಅಂತ ಟ್ವಿಟ್ಟರ್ ಲೋಕದಲ್ಲಿ ಇರುವವರಿಗೆಲ್ಲಾ ಗೊತ್ತು.ಬಹುಭಾಷಾ ನಟ ಕಿಚ್ಚ ಸುದೀಪ್ ನಟನೆ ಮಾತ್ರವಲ್ಲದೇ, ನಿರ್ಮಾಣ, ನಿರ್ದೇಶನದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ರಕ್ಷಿತ್ ಶೆಟ್ಟಿ ನಟರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರೂ, ‘ಉಳಿದವರು ಕಂಡಂತೆ’ ಚಿತ್ರ ನಿರ್ದೇಶಿಸಿ ಗಮನ ಸೆಳೆದಿದ್ದಾರೆ. ಅನೇಕ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಸುದೀಪ್, ಮತ್ತೊಬ್ಬ ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಕಾಲ್ ಶೀಟ್ ಕೊಟ್ಟಿದ್ದಾರೆ. ಹೀಗೆ ನಟನೆ ಮತ್ತು ನಿರ್ದೇಶನದಲ್ಲಿ ಯಶಸ್ಸು ಕಂಡಿರುವ ಸುದೀಪ್ ಮತ್ತು ರಕ್ಷಿತ್ ಶೆಟ್ಟಿ ಒಂದಾಗುತ್ತಿದ್ದಾರೆ.

ಗೆಳೆಯರಿಬ್ಬರು ಒಟ್ಟಿಗೆ ಸೇರಿ ‘ಥಗ್ಸ್ ಆಫ್ ಮಾಲ್ಗುಡಿ’ ಎಂಬ ಸಿನಿಮಾ ಮಾಡುವುದಾಗಿ ಹೇಳಿಕೊಂಡ ವಿಚಾರ ಕೂಡ ಈಗಾಗಲೇ ಜಗಜ್ಜಾಹೀರಾಗಿದೆ. ಈಗ ಇದೇ ‘ಥಗ್ಸ್ ಆಫ್ ಮಾಲ್ಗುಡಿ’ ಮುಂದಿನ ವರ್ಷ ಸೆಟ್ಟೇರಲಿದೆ ಅಂತ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

‘ಥಗ್ಸ್ ಆಫ್ ಮಾಲ್ಗುಡಿ’ ಹೆಸರಿನ ಚಿತ್ರವನ್ನು ರಕ್ಷಿತ್ ಶೆಟ್ಟಿ ನಿರ್ದೇಶಿಸಲಿದ್ದು, ಸುದೀಪ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ‘ಹೆಬ್ಬುಲಿ’ಯಲ್ಲಿ ಬ್ಯುಸಿಯಾಗಿರುವ ಸುದೀಪ್, ನಂತರದಲ್ಲಿ ಮತ್ತೊಂದು ಚಿತ್ರದಲ್ಲಿ ಅಭಿನಯಿಸಲಿದ್ದು, ಅದಾದ ಬಳಿಕ ರಕ್ಷಿತ್ ಶೆಟ್ಟಿ ನಿರ್ದೇಶನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.