ಕೊಪ್ಪಳ ಜಿಲ್ಲೆ 107 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
449

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಕೊಪ್ಪಳ ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 107 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜುಲೈ 31 .2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕ ಮತ್ತು ಸಹಾಯಕ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಉದ್ಯೋಗ ಸ್ಥಳ (Job Location): ಕೊಪ್ಪಳ ಜಿಲ್ಲೆ ( ಕರ್ನಾಟಕ)

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ: ಮೊದಲ ಆದ್ಯತೆ ಆಸಿಡ್ ದಾಳಿಗೊಳಗಾದವರಿಗೆ, ಎರಡನೇ ಆದ್ಯತೆ: ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ಮೂರನೆ ಆದ್ಯತೆ ವಿಧವೆಯರಿಗೆ , ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ,

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2019ರ ರೊಳಗೆ ಅರ್ಜಿ ಸಲ್ಲಿಸಬೇಕು.