ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ದುರಂತ

0
995

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದಲ್ಲಿ ದುರಂತ ಸಂಭವಿಸಿದೆ.

60 ಅಡಿ ಎತ್ತರದ ರಥ ಕುಸಿದು ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಕೊಟ್ಟೂರಿನ ಶ್ರೀ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. 60 ಅಡಿ ಎತ್ತರದ ರಥವನ್ನು ಎಳೆಯುವ ಸಂದರ್ಭದಲ್ಲಿ ಗಾಲಿಯ ಅಚ್ಚು ಮುರಿದು ರಥ ಒಮ್ಮೆಲೆ ಕುಸಿದಿದೆ.

ಚಕ್ರದ ಅಚ್ಚು ಮುರಿದ ಕಾರಣ 60 ಅಡಿ ಉದ್ದದ ರಥ ಕುಸಿದು ಬಿದ್ದಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರು ಗ್ರಾಮದಲ್ಲಿ ನಡೆದಿದೆ. ಕೊಟ್ಟೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಗುರುಬಸವೇಶ್ವರ ರಥೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ರಥದ ಕೆಳಗೆ ಹಲವಾರು ಮಂದಿ ಸಿಲುಕಿರುವ ಸಾಧ್ಯತೆಯಿದೆ. ಮೂಲ ನಕ್ಷತ್ರದ ದಿನದಂದು ಈ ಜಾತ್ರೆ ನಡೆಯುತ್ತದೆ. ಈ ರಥಕ್ಕೆ ತೇರು ಕಟ್ಟುವ ಕಟ್ಟುವ ಕೆಲಸ 15 ದಿನಗಳಿಂದ ಶುರುವಾಗುತ್ತದೆ. 6 ಲಕ್ಷಕ್ಕೂ ಹೆಚ್ಚು ಜನರು ಈ ಜಾತ್ರೆಯಲ್ಲಿ ಸೇರುತ್ತಾರೆ.

ರಥದ ಅಡಿಗೆ ಹಲವರು ಸಿಲುಕಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.