ರಾತ್ರೋ ರಾತ್ರಿ ರಸ್ತೆಗಿಳಿದು ರೈತರ ಸಮಸ್ಯೆಗಳನ್ನ ಪ್ರತೆಕ್ಷ್ಯವಾಗಿ ನೋಡಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಡಿ.ಕೆ. ಶಿವಕುಮಾರ್.!

0
134

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಆದಾಗಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜನರ, ಮತ್ತು ರೈತರ ಕಷ್ಟಗಳಿಗೆ ಸ್ಪಂಧಿಸುತ್ತಾನೆ ಇದ್ದಾರೆ. ಈ ನಡುವೆ ರೈತರು ಬೆಳೆದ ತರಕಾರಿಗಳನ್ನ ಕೂಡ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಿದ್ದಾರೆ. ಹಾಗೆಯೇ ಸರ್ಕಾರದಿಂದ ಆಗುವ ಎಲ್ಲ ಕೆಲಸಕ್ಕೆ ಸರಿಯಾಗಿ ಮನವಿ ಮಾಡಿ ಎಚ್ಚರಿಸಿಸುತ್ತಾನೆ ಬಂದಿದ್ದಾರೆ. ತರು, ಶ್ರಮಿಕ ವರ್ಗದವರು ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರೋಪಾಯ ಕಂಡು ಹಿಡಿಯಲು ವಿಧಾನಸೌಧದಲ್ಲಿ ಸರ್ವ ಪಕ್ಷದ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ರಾತ್ರೋ ರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.

ರಾತ್ರೋ ರಾತ್ರಿ ರೈತರ ಕಷ್ಟಗಳನ್ನ ಪರೀಕ್ಷಿಸಿದ ಡಿಕೆಶಿ:

ಲಾಕ್ ಡೌನ್ ಮತ್ತೆ ಮುಂದುವರೆದಿದ್ದು ರೈತರು ಬೆಳೆದ ಬೇಳೆ ಮಾರಾಟಕ್ಕೆ ತೊಂದರೆ ಆಗುತ್ತಿದ್ದು ಇದರಿಂದ ಅನ್ನದಾತ ತೊಂದರೆಗೆ ಸಿಲುಕಿದ್ದಾನೆ, ಅದಕ್ಕಾಗಿ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾತ್ರೋ ರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಕಡೆಯ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದರು.

ಕೆ.ಆರ್.ಪುರ ಮಾರುಕಟ್ಟೆ ಸಮೀಪ ಶುಕ್ರವಾರ ಮಧ್ಯರಾತ್ರಿ 12.15ರ ಸುಮಾರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಇದೇ ವೇಳೆ ಹಲವಾರು ರೈತರು ತಮಗಾಗುತ್ತಿರುವ ತೊಂದರೆ ಬಗ್ಗೆ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ತಮ ಸಮಸ್ಯೆಗಳನ್ನ ಹೇಳಿಕೊಂಡರು. ಈ ಹಿಂದೆ ಕೂಡ ಸಂಕಷ್ಟದಲ್ಲಿರುವ ರೈತರ ಪರ ಮಾತನಾಡಿ, ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ.

ರಾಜಕಾರಣ ಮಾಡಬಾರದು ಹಾಗೂ ಮಾನವೀಯತೆ ದೃಷ್ಟಿಯಿಂದ ನಾವು ಸರ್ಕಾರದ ಜತೆ ಕೈ ಜೋಡಿಸಿದ್ದೇವೆ. ಕಳೆದ 40 ದಿನಗಳಲ್ಲಿ ಸರ್ಕಾರ ಏನು ಮಾಡಿದೆ ಎಂಬುದನ್ನು ನೀವೆಲ್ಲ ನೋಡಿದ್ದೀರಿ. ಸಚಿವರುಗಳ ನಡುವೆ ಸಮನ್ವಯತೆ, ಅಧಿಕಾರಿಗಳಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಪ್ರತಿ ವಿಚಾರದಲ್ಲೂ ದಂಧೆ ನಡೆಯುತ್ತಿದೆ. ಇದನ್ನು ನೋಡಿಕೊಂಡು ಕೂರಲು ಇನ್ನು ಸಾಧ್ಯವಿಲ್ಲ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಜನರಿಗೆ ಏನು ಆಶ್ವಾಸನೆ ಕೊಟ್ಟರೋ ಅದರಲ್ಲಿ ಒಂದೇ ಒಂದೂ ಕಾರ್ಯ ರೂಪಕ್ಕೆ ಬಂದಿಲ್ಲ. ಆಹಾರ ವಿತರಣೆಯಲ್ಲಿ ಶೇ.20 ರಷ್ಟು ಕೆಲಸ ಆಗಿರೋದು ಬಿಟ್ಟರೆ, ಆರೋಗ್ಯ ವಿಷಯದಿಂದ ಹಿಡಿದು ಕಾರ್ಮಿಕರ ಸಮಸ್ಯೆವರೆಗೂ ಎಲ್ಲೂ ಕೆಲಸ ಆಗಿಲ್ಲ. ಆದಾಯ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿದಾಗ ಪಿಂಚಣಿ ಹಣ ಕೂಡ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ ಎಂಬುದು ಗೊತ್ತಾಗಿದೆ. ಇದನ್ನು ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

Also read: ಮತ್ತೆ ಮೇ 17 ರ ವರೆಗೆ ಲಾಕ್ ಡೌನ್ ಮುಂದುವರೆಕೆ; ಗ್ರೀನ್‌ ಝೋನ್‌-ನಲ್ಲಿ ಬಹುತೇಕ ಸಡಿಲಿಕೆ ರೆಡ್, ಆರೆಂಜ್ ಜೋನ್-ಗಳ ಕತೆ ಏನು.?