ಕೆಪಿಎಸ್‌ಸಿ ನೇಮಕಾತಿ 306 ಗ್ರೂಪ್ ಸಿ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
581

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಲೋಕ ಸೇವಾ ಆಯೋಗ 306 ಗ್ರೂಪ್ ಸಿ ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಏಪ್ರಿಲ್ 22,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ 870 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಯ ಹೆಸರು (Name Of The Posts): ಗ್ರೂಪ್ ಸಿ ಟೆಕ್ನಿಕಲ್ ಹುದ್ದೆಗಳು

ಸಂಸ್ಥೆ (Organisation): ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ)

ಉದ್ಯೋಗ ಸ್ಥಳ (Job Location): ಕರ್ನಾಟಕ

ವಿದ್ಯಾರ್ಹತೆ (Educational Qualification): ಎಸ್‌ಎಸ್‌ಎಲ್‌ಸಿ,ಪಿಯುಸಿ, ಡಿಪ್ಲೋಮಾ, ಪದವಿ,ಬಿ.ಫಾರ್ಮ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 2A,2B,3A ಮತ್ತು 3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ 5ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 600/- ರೂ, 2A,2B,3A ಮತ್ತು 3B ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಏಪ್ರಿಲ್ 23,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ: http://www.kpsc.kar.nic.in/ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ: http://www.kpsc.kar.nic.in/TECHNL%20GROUP%20C%20PO%20BBMP%20RPC.pdf ಕ್ಲಿಕ್ ಮಾಡಿ.