ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ನೇರ ನೇಮಕಾತಿ

0
3068

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸ ಬಹುದಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ 1845 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯು ಜಾರಿಯಲ್ಲಿರುತ್ತದೆ.

ಸಹಾಯಕ ಇಂಜಿನಿಯರ್ (ವಿದ್ಯುತ್ ), ಸಹಾಯಕ ಲೆಕ್ಕಾಧಿಕಾರಿ, ಕಿರಿಯ ಇಂಜಿನಿಯರ್ (ವಿದ್ಯುತ್/ಸಿವಿಲ್), ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ: 07/07/2017 ರಿಂದ 11 / 07 /2017 ರವರೆಗೆ ಆನ್-ಲೈನ್ ಮೂಲಕ ಆಪ್ಟಿಟ್ಯೂಡ್ ಪರೀಕ್ಷೆಯನ್ನು ನೆಡೆಸಲಾಗುತ್ತದೆ.

ಈ ನೇಮಕಾತಿ ಸಂಪೂರ್ಣ ಪಾರದರ್ಶಕ, ಗಣಕೀಕೃತ ಹಾಗೂ ಅರ್ಹ ಅಭ್ಯರ್ಥಿಗಳು ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಅರ್ಹತೆಯ ಆಧಾರದ ಮೇರೆಗೆ ಚಾಲ್ತಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಗಳನ್ವಯ ಆಯ್ಕೆಯನ್ನು ಮಾಡಲಾಗುವುದು. ನೇಮಕಾತಿಗಾಗಿ ಯಾವುದೇ ಸಂದರ್ಶನವನ್ನು ನೆಡಸಲಾಗುವುದಿಲ್ಲ.

ಎಚ್ಚರಿಕೆ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಸಲುವಾಗಿ ಯಾವುದೇ ಅಭ್ಯರ್ಥಿಯು ಯಾವುದೇ ವ್ಯಕಿ ಅಥವಾ ಮಧ್ಯವರ್ತಿಗಳನ್ನು ಸಂಪರ್ಕಿಸುವುದಾಗಲೀ ಅಥವಾ ಅವರ ಯಾವುದೇ ಅಶ್ವಾಶನೆ, ಆಮಿಷಗಳಿಗೆ ಒಳಗಾಗುವುದಾಗಲಿ ಮಾಡಬಾರದು ಹಾಗೂ ಯಾವುದೇ ವದಂತಿಗಳಿಗೆ ಕಿವಿಕೊಡಬಾರದು.

ಈ ಕೆಳಕಂಡ ಅಂತರ್ಜಾಲದಿಂದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ
* ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) www.kptcl.com
* ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) www.bescom.org
* ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಚೆಸ್ಕಾಂ) www.cescmysore.org
* ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) www.hescom.co.in
* ಗುಲಬರ್ಗಾ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ) www.gescom.in