ದ್ವಿತೀಯ ಪಿಯುಸಿ ಹಾಗೂ ಪದವಿ ಆದವರಿಗೆ KPTCL ನಲ್ಲಿ ವಿವಿಧ 3646 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
2796

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. KPTCL (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ) ಖಾಲಿಯಿರುವ 3646 ಬೆಸ್ಕಾಂ, ಸೆಸ್ಕಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 30,2019ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

Also read: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 10,611 ಶಾಲಾ ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಹಾಯಕ ಕಾರ್ಯನಿರ್ವಾಹಕ, ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕಿರಿಯ ಆಪ್ತ ಸಹಾಯಕ, ಕಿರಿಯ ಸಹಾಯಕ, ಚಾಲಕ, ಕಿರಿಯ ಪವರ್ ಮ್ಯಾನ್.

ಸಂಸ್ಥೆ (Organisation): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ.

ವಿದ್ಯಾರ್ಹತೆ (Educational Qualification): 12ನೇ ತರಗತಿ (ದ್ವಿತೀಯ ಪಿಯುಸಿ) ಹಾಗೂ ಯಾವುದಾದರೂ ಪದವಿ ಪೂರ್ಣಗೊಳಿಸಬೇಕು.

ಆಯ್ಕೆ ವಿಧಾನ: ಮೇಲೆ ತಿಳಿಸಲಾಗಿರುವ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): ಮಾರ್ಚ್ 30,2019

ಹೆಚ್ಚಿನ ಮಾಹಿತಿಗಾಗಿ: http://www.kptcl.com/

ನೇರವಾಗಿ ಆದೇಶ ಪ್ರತಿಗಾಗಿ: http://file///C:/Users/Admin/Desktop/New%20Doc%202019-02-23%2007.46.46.pdf ಕ್ಲಿಕ್ ಮಾಡಿ.