ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
660

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 8,2019 ರೊಳಗೆ ಕಳುಹಿಸಬೇಕು.

Also read: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟನೆ

ಹುದ್ದೆಗೆ ಸಂಬಂಧಪಟ್ಟ ಮಾಹಿತಿ;

ಹುದ್ದೆಯ ಹೆಸರು (Name Of The Posts): ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ & ಆಫೀಸರ್ ಅಸಿಸ್ಟೆಂಟ್

ಸಂಸ್ಥೆ (Organisation): ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (KSIC)

ವಿದ್ಯಾರ್ಹತೆ (Educational Qualification): ಎಂಬಿಎ ಅಥವಾ ಬಿ.ಇ /ಬಿ.ಟೆಕ್ /ಎಂ.ಎಸ್‌ಸಿ , ಪಿಜಿ ಡಿಪ್ಲೋಮಾ,ಪದವಿ,ಪಿಯುಸಿ ,ಐಟಿಐ,ಎಸ್‌ಎಸ್‌ಎಲ್‌ಸಿ

ಉದ್ಯೋಗ ಸ್ಥಳ (Job Location): ಕರ್ನಾಟಕ

ವೇತನ (Salary Scale): 17,000/- ರಿಂದ 1,04,600/- ರೂ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಭಾರತೀಯ ಪೋಸ್ಟರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ ಮೂಲಕ

ಪಾವತಿಸಬಹುದು.ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 8, 2019

ಅರ್ಜಿ ಸಲ್ಲಿಸುವ ಪ್ರಕ್ರಿಯೆ; http://www.ksicsilk.com/ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಕಚೇರಿಯ ವಿಳಾಸ: ಜನರಲ್ ಮ್ಯಾನೇಜರ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
3ನೇ ಮತ್ತು 4ನೇ ಮಹಡಿ, ಪಬ್ಲಿಕ್ ಯುಟಿಲಿಟಿ ಬ್ಯುಲ್ಡಿಂಗ್, ಎಂ.ಜಿ. ರಸ್ತೆ, ಬೆಂಗಳೂರು-560001.

ಹೆಚ್ಚಿನ ಮಾಹಿತಿಗಾಗಿ: https://clusterzap1.blob.core.windows.net/41-rybveoil/ksic/careers/Advertisement-05.03.2019-HK-(Kan-Ver).pdf ಕ್ಲಿಕ್ ಮಾಡಿ.