ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೆಮಾಕಾತಿ ಪ್ರಕಟಣೆ..

0
523

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ) ನೇಮಕಾತಿ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 24,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

 

Also read: ಜೆಎಸ್‌ಎಸ್‌ ಮಹಾವಿದ್ಯಾಪೀಠದಲ್ಲಿ ಖಾಲಿಯಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)

ಸಂಸ್ಥೆ (Organisation): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಕರ್ನಾಟಕ

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜೂನ್ 27,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 24, 2019

ಹೆಚ್ಚಿನ ಮಾಹಿತಿಗಾಗಿ: https://www.ksp.gov.in/ ಕ್ಲಿಕ್ ಮಾಡಿ.