ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
252

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 159 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜೂನ್ 29,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೆಮಾಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ)

ಸಂಸ್ಥೆ (Organisation): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಎಸ್‌.ಎಸ್‌.ಎಲ್‌.ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಕರ್ನಾಟಕ

ವಯೋಮಿತಿ: ಜೂನ್ 29,2019ರ ಅನ್ವಯ ಕನಿಷ್ಟ 18 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ, ಇತರೆ ಅಭ್ಯರ್ಥಿಗಳು ಗರಿಷ್ಟ 25 ವರ್ಷ ಮತ್ತು ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ , ಸಹಿಷ್ಣುತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಜುಲೈ 3,2019 ರೊಳಗೆ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವಬ್‌ಸೈಟ್‌ https://https://ksp.gov.in/index.aspx ನಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಜೂನ್ 29,2019 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://apc19.ksp-online.in/PDF/Notification.pdf ಇಲ್ಲಿ ಕ್ಲಿಕ್ ಮಾಡಿ.