ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3026 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
152

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3026 ಸಶಸ್ತ್ರ ಹಾಗೂ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 17,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: SSC ನೇಮಕಾತಿ; ಶೀಘ್ರಲಿಪಿಗಾರ ಗ್ರೇಡ್ “ಸಿ” ಮತ್ತು ಗ್ರೇಡ್ “ಡಿ” ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್

ಒಟ್ಟು ಹುದ್ದೆಗಳು: 3026

ವಿದ್ಯಾರ್ಹತೆ: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ. ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದುಕೊಂಡಿರಬೇಕು

ಖಾಲಿ ಹುದ್ದೆಗಳ ವಿವರ: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್/ಡಿಎಆರ್) – 1013 ( ಪುರುಷ) ಹುದ್ದೆಗಳು, ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ)- 2013 (ಪುರುಷ ಮತ್ತು ಮಹಿಳಾ) ಒಟ್ಟು 3026 ಹುದ್ದೆಗಳು

ವಯೋಮಿತಿ: ಕನಿಷ್ಟ 18 ವರ್ಷ, ಗರಿಷ್ಟ 25 ವರ್ಷ ಮತ್ತು SC /ST/ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಹಾಗೂ ಬುಡಕಟ್ಟು ಜನಾಂಗ ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಮೇಲ್ಕಂಡ ಎರಡು ಹುದ್ದೆಗಳಿಗೆ ಸಾಮಾನ್ಯ ವರ್ಗ, ಪ್ರವರ್ಗ2(ಎ), 2(ಬಿ), 3(ಎ), 3(ಬಿ), ಸೇರಿದ ಅಭ್ಯರ್ಥಿಗಳಿಗೆ 250 ರು. SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ 100 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಸೆಪ್ಟೆಂಬರ್ 23,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 17,2019

ಹೆಚ್ಚಿನ ಮಾಹಿತಿಗಾಗಿ: https://www.ksp.gov.in/ ಕ್ಲಿಕ್ ಮಾಡಿ.