ಕುದುರೆಮುಖ ಐರನ್ ಓರ್ ಕಂಪೆನಿಯಲ್ಲಿ ಜಿಯೋಲಜಿಸ್ಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
316

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ ನೇಮಕಾತಿ ಜಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ May 27, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ನ್ಯಾಷನಲ್ ಡೈರಿ ಡೆವಲಪ್ಮೆಂಟ್ ಬೋರ್ಡ್ ವಿಶೇಷ-ಕರ್ತವ್ಯ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜಿಯೋಲಜಿಸ್ಟ್

ಸಂಸ್ಥೆ (Organisation): ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್‌ ಲಿಮಿಟೆಡ್)

ವಿದ್ಯಾರ್ಹತೆ (Educational Qualification): ಜಿಯೋಲಜಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಏಪ್ರಿಲ್ 30,2019 ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: May 27, 2019.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಕೆಐಓಸಿಎಲ್‌ನ ಅಧಿಕೃತ ವೆಬ್‌ಸೈಟ್ https://www.kioclltd.in/ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇ 27,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ: ಕೆಐಓಸಿಎಲ್‌ ಲಿಮಿಟೆಡ್, ಕಾರ್ಪೋರೇಟ್ ಆಫೀಸ್, 11 ಬ್ಲಾಕ್, ಕೋರಮಂಗಲ, ಬೆಂಗಳೂರು-560034.