ಪಾಕ್ ವಿರುದ್ಧ ವಾದ ಮಂಡಿಸಲು ಭಾರತದ ವಕೀಲರು ಪಡೆದ ಶುಲ್ಕ 1 ರೂ. ಆದರೆ ಪಾಕ್-ಪರ ವಕೀಲರು ಪಡೆದಿದ್ದು 20 ಕೋಟಿ ರೂ ಅಂತೆ..

0
182

ಇಡಿ ಜಗತ್ತಿನಲ್ಲಿ ಪ್ರಚಾರವಾದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನವು, ಜಾಧವ್ ಓರ್ವ ಗೂಢಚಾರಿ ಎಂದು ಸಾಬೀತುಪಡಿಸಲು ತನ್ನ ವಕೀಲರಿಗೆ 20 ಕೋ.ರೂ.ಗೆ ಅಧಿಕ ಮೊತ್ತವನ್ನು ಖರ್ಚುಮಾಡಿದೆ, ಅದರಂತೆ ಭಾರತವನ್ನು ಪ್ರತಿನಿಧಿಸಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ತನ್ನ ವಾದ ಮಂಡನೆಗೆ ಕೇವಲ ಒಂದು ರೂ. ಶುಲ್ಕ ಪಡೆದು ನೆದರ್‌ಲ್ಯಾಂಡ್‌ನ ಹೇಗ್‌ನಲ್ಲಿರುವ ಅಂತರ್‌ರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ಸಾರ್ವಜನಿಕ ವಿಚಾರಣೆ ನಡೆದು ತೀರ್ಪು ನೀಡಲಾಗಿದೆ.

Also read: ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಪಾಕಿಸ್ತಾನ ಸುಳ್ಳು ಆರೋಪದ ಮೇಲೆ ಬಂಧಿಸಿದ್ದು ಹೇಗೆ ಗೊತ್ತಾ??

ಹೌದು ಹೇಗ್‌ನ ಅಂತರ್‌ರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತವನ್ನು ಪ್ರತಿನಿಧಿಸಲು ಸಾಳ್ವೆ ಕೇವಲ 1 ರೂ. ಶುಲ್ಕ ಪಡೆದಿದ್ದಾರೆ ಎಂಬ ಅಂಶವನ್ನು ಮಾಜಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ 2017ರ ಮೇ 15 ರಂದು ಟ್ವಿಟರ್‌ನ ಮೂಲಕ ಬಹಿರಂಗಪಡಿಸಿದ್ದರು. ಪಾಕ್ ಈ ಪ್ರಕರಣವನ್ನು ಗೆಲ್ಲುವ ನಿಟ್ಟಿನಲ್ಲಿ ಅವರ ಪರ ವಕೀಲ ಖವಾರ್ ಖುರೇಷಿ ಅವರಿಗೆ ಬರೋಬ್ಬರಿ 20 ಕೋಟಿಗೂ ಅಧಿಕ ಹಣವನ್ನು ಶುಲ್ಕವಾಗಿ ನೀಡಿದೆ. ಈ ಬಗ್ಗೆ ಕಳೆದ ವರ್ಷ ರಾಷ್ಟ್ರೀಯ ಸಂಸತ್ತಿನಲ್ಲಿ ಪಾಕಿಸ್ತಾನ ನೀಡಿರುವ ದೇಶದ ಬಜೆಟ್ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಯುಕೆ ಮೂಲದ ನ್ಯಾಯವಾದಿ ಖವಾರ್ ಖುರೇಷಿಗೆ ಪಾಕ್ 20 ಕೋಟಿಗೂ ಅಧಿಕ ಹಣವನ್ನು ಶುಲ್ಕದಲ್ಲಿ ನೀಡಿದೆ ಎಂದು ನಮೂದಿಸಿದೆ. ಖುರೇಷಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಾನೂನು ಪದವೀಧರರಾಗಿದ್ದು, ಐಸಿಜೆಯಲ್ಲಿ ಪ್ರಕರಣ ಸಂಬಂಧ ಹೋರಾಡುತ್ತಿರುವ ಅತ್ಯಂತ ಕಿರಿಯ ವಕೀಲ ಎಂದು ಹೇಳಲಾಗಿದೆ. ಆದರೆ ಸಾಲ್ವೆ ಅವರು ಹೇಗ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಕೇವಲ 1 ರೂ.ಗಳನ್ನು ಪಡೆದಿದ್ದಾರೆ ಎಂದು ಹೇಳಿದ್ದರು. ಸಾಮಾನ್ಯವಾಗಿ ಹರೀಶ್ ಸಾಲ್ವೆ ಅವರು 30 ಲಕ್ಷ ರೂ. ಅನ್ನು ಒಂದು ದಿನದ ವಿಚಾರಣೆಗಾಗಿ ಪಡೆಯುತ್ತಾರೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು, ಅದರಂತೆ ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ್ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು.

ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.