ಭಾರತೀಯ ಜೀವ ವಿಮಾ ನಿಗಮ 8,000ಕ್ಕೂ ಹೆಚ್ಚು ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
244

ಪದವಿ ಓದಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶ. ಭಾರತೀಯ ಜೀವ ವಿಮಾ ನಿಗಮ (LIC) ಖಾಲಿ ಇರುವ 8,000 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 1,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: SSLC ಪಾಸಾದವರಿಗೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಸಹಾಯಕ

ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವ‍ರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 510/-ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 85/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್‌ https://www.licindia.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 17.9.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1.10.2019
ಪರೀಕ್ಷೆ ದಿನಾಂಕ-ಪ್ರಿಲಿಮಿನರಿ : 21 ಮತ್ತು 22ರ ಅಕ್ಟೋಬರ್ 2019

ಹೆಚ್ಚಿನ ಮಾಹಿತಿಗಾಗಿ: https://www.licindia.in/ ಕ್ಲಿಕ್ ಮಾಡಿ.