ಭಾರತೀಯ ಜೀವ ವಿಮಾ ನಿಗಮ ಅಸಿಸ್ಟೆಂಟ್,ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
168

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (LICHFL) 300 ಅಸಿಸ್ಟೆಂಟ್,ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್,ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್

ಸಂಸ್ಥೆ (Organisation): ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ (ಎಲ್‌ಐಸಿ ಹೆಚ್‌ಎಫ್ಎಲ್‌)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಪದವಿ, ಸಿಎ,ಪಿಜಿಡಿಎಂ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಜನವರಿ 1,2019 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ http://www.lichousing.com/ ಗೆ ಹೋಗಿ ಕೇಳಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 26,2019ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: http://www.lichousing.com/ ಕ್ಲಿಕ್ ಮಾಡಿ.