ರಾಜ್ಯದ ತುಂಬೆಲ್ಲ ಅರಳಿದ ಕಮಲ; 5 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು, 7 ಕ್ಷೇತ್ರಗಳಲ್ಲಿ ಮುನ್ನಡೆ.!

0
167

ಉಪಚುನಾವಣೆಯಲ್ಲಿ ಎಲ್ಲಲ್ಲೂ ಕಮಲ ಅರಳುವ ಸಾಧ್ಯತೆ ಹೆಚ್ಚಿದ್ದು, ಈಗಾಗಲೇ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ 4 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಹಿರೇಕೆರೂರಿನಲ್ಲಿ ಬಿ,ಸಿ ಪಾಟೀಲ್ 71731 ಮತಗಳಿಂದ ಗೆಲುವು ಸಾಧಿಸಿದರೆ, ಮಹಾಲಕ್ಷ್ಮೀ ಲೇಔಟ್ ಕೆ, ಗೋಪಾಲಯ್ಯ ಗೆಲುವು ಸಾಧಿಸಿದ್ದಾರೆ, ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಅದರಂತೆ ಕೆ,ಆರ್ ಪೇಟೆ ಅಲ್ಲಿವೂ ಬಿಜೆಪಿ ಗೆಲುವು ಸಾಧಿಸಿದೆ.

ಹೌದು ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು.

ಇದರಂತೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, 11 ಗಂಟೆ ಹೊತ್ತಿಗೆ ಆಯಾ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಲ್ಲರು ಎಂಬುದರ ಸ್ಪಷ್ಟ ಚಿತ್ರಣ
ಬಹಿರಂಗಗೊಳ್ಳಲಿದೆ. ಹೀಗಾಗಿ ಅನರ್ಹ ಶಾಸಕರಲ್ಲಿ ಆತಂಕ ಮತ್ತು ಕುತೂಹಲ ಹೆಚ್ಚಿದೆ. ಈ ಪಲಿತಾಂಶ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು, ಅದರಂತೆ ಪಲಿತಾಂಶ ಹೊರಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಚುನಾವಣಾ ಫಲಿತಾಂಶದತ್ತ ರಾಜ್ಯದ ಗಮನ ಹರಿದಿದೆ. ಫಲಿತಾಂಶ ಕುರಿತು ನಾವು ಕಾತುರರಾಗಿದ್ದೇವೆ.

ಬಹುಮತದಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂಬ ವಿಶ್ವಾಸ ನಮಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಗೆದ್ದರೂ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲಬಹುದು ಎಂದು ಹೇಳಿದ್ದಾರೆ. ಮುಂದಿನ ಮೂರುವರೆ ವರ್ಷಗಳವರೆಗೂ ಯಾವುದೇ ಅಡೆತಡೆಗಳಿಲ್ಲದೆ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ರಾಜ್ಯದಲ್ಲಿ ನಾವು ಸ್ಥಿರ ಸರ್ಕಾರವನ್ನು ನೀಡುತ್ತೇವೆ. ಜನಪರ ಆಡಳಿತ ನಮ್ಮದಾಗಿದೆ. ಚುನಾವಣಾ ಫಲಿತಾಂಶಕ್ಕೂ ಮುನ್ನವೇ ವಿರೋಧ ಪಕ್ಷಗಳ ಸಹಕಾರವನ್ನು ಕೋರುತ್ತಿದ್ದೇನೆ.
ಅಭಿವೃದ್ಧಿ ಹಾದಿಗೆ ನಡೆಯುತ್ತಿರುವ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಪ್ರಗತಿಗೆ ಸಹಕಾರ ನೀಡಿ. ಈ ಬಾರಿಯ ಬಜೆಟ್ ವೇಳೆ ಈ ಸಮುದಾಯಗಳಿಗೆ ವಿಶೇಷ ಯೋಜನೆಗಳನ್ನು ಘೋಷಣೆ ಮಾಡುತ್ತೇವೆ. ಅದರಂತೆ ಸಿಎಂ ಯಡಿಯೂರಪ್ಪ ಅವರು ತಮ್ಮ ಹುಟ್ಟೂರಲ್ಲಿ ಬಿಜೆಪಿ ಗೆಲ್ಲಿಸಲು ಸಾಧ್ಯವಾಗಿರಲಿಲ್ಲ ಆದರೆ ಈ ಭಾರಿ ಗೆಲುವು ಸಾಧಿಸಿದ್ದು ಇತಿಹಾಸ ನಿರ್ಮಿಸಿದೆ.