ದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸುತ್ತಿದಂತೆ ಮೈತ್ರಿ ಸರ್ಕಾರ ಪತನಕ್ಕೆ ಸ್ಪೋಟಕ ಮಾಹಿತಿ ಲಭ್ಯ; ಬಿಎಸ್‍ವೈಗೆ 20ಕ್ಕೂ ಹೆಚ್ಚು ಕೈ ಶಾಸಕರಿಂದ ಕರೆ..

0
311

ದೇಶದಲ್ಲಿ ಬಿಜೆಪಿ ಗೆಲ್ಲುವುದು ಖಾತರಿಯಾಗಿದ್ದು ಎಲ್ಲೆಡೆಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಪೋಟಕ ಸುದ್ದಿಯೊಂದು ಹರಡಿದ್ದು, ಮೈತ್ರಿ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವೆನ್ನುವ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ ಮೂಡಿದು. ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಮೈತ್ರಿ ಸರ್ಕಾರದ ಭವಿಷ್ಯ ನಿಂತಿದೆ ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ಸಿನ 20 ಶಾಸಕರು ಯಡಿಯೂರಪ್ಪನವರನ್ನು ಸಂಪರ್ಕಿಸಿದ್ದಾರೆ ಎನ್ನುವ ಮಾಹಿತಿ ತಿಳಿದಿದೆ.

ಹೌದು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗಿದ್ದು, ಯಡಿಯೂರಪ್ಪ ಅವರಿಗೆ ಸುಮಾರು 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಫೋನ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕೌಂಟ್‍ಡೌನ್ ಶುರುವಾಯ್ತಾ ಎನ್ನುವ ಪ್ರಶ್ನೆ ಎದ್ದಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸತ್ಯವೆನ್ನುವ ಮಾತುಗಳು ಕೇಳಿಬರುತ್ತಿವೆ. ಅದರಂತೆ 24, ಅಥವಾ 25 ರ ಒಳಗೆ ಕುಮಾರಸ್ವಾಮಿ ರಾಜೀನಾಮೆ ಕೊಡುವುದು ಪಕ್ಕಾ ಎನ್ನುತ್ತಿದ ಬಿಜೆಪಿ ನಾಯಕರು ಮತ್ತೆ ಕರ್ನಾಟಕದಲ್ಲಿ ಬೆಜಿಪಿ ಅಧಿಕಾರಕ್ಕೆ ತರುವ ಸಿದ್ದತೆಯಲ್ಲಿದ್ದಾರೆ.

ಅದರಂತೆ ರಾಜ್ಯದಲ್ಲಿ 23 ಸ್ಥಾನಗಳಲ್ಲಿ ಬಿಜೆಪಿ ವಿಜಯಗಳಿಸಲಿದೆ ಎಂದು ಬಿಜೆಪಿ ನಾಯಕರು ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದು, ಇದೀಗ ಬಿಜೆಪಿ 23 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಚುನಾವಣೆ ಎದುರಿಸಿದ್ದು, ಸದ್ಯ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ ಜೆಡಿಎಸ್ 1 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಎಲ್ಲ ಬೆಳವಣಿಗಳನ್ನು ನೋಡಿದ ಕುಮಾರಸ್ವಾಮಿ ಭಯದಲ್ಲಿ ಮುಳುಗಿದ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಪದೇ ಪದೇ ಮುನಿಸಿಕೊಳ್ಳುತ್ತಿದ್ದರು ಆದರೆ ಅದೆಲ್ಲವನ್ನು ಮರೆತ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಚ್‍ಡಿಕೆ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಮಂಡ್ಯ, ತುಮಕೂರಿನಲ್ಲಿ ಫಲಿತಾಂಶ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹಿನ್ನೆಲೆಯಲಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮನೆಯಿಂದ ತಾಜ್ ವೆಸ್ಟೆಂಡ್ ಹೋಟೆಲ್ ಗೆ ತೆರಳಿದ್ದಾರೆ. ಆದರೆ ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ತಮ್ಮ ಪುತ್ರ ಗೆಲುವಿನ ವಿಶಾಸ್ವ ಕಳೆದುಕೊಂಡ ಸಿಎಂ ಯಾವ ವಿಚಾರ ಮಾತನಾಡಲಿದ್ದಾರೆ ಎನ್ನುವುದರ ಬಗ್ಗೆ ಸ್ಪಷ್ಟವಾಗಿಲ್ಲ ಮಂಡ್ಯದಲ್ಲಿ ಕೂಡ ಸುಮಲತಾ ಮುನ್ನಡೆ ಸಾಧಿಸುತ್ತಿದ್ದಾರೆ.

ಈಗಾಗಲೇ ಗೆದ್ದ ನಾಯಕರು:

  • ವಾರಾಣಸಿಯಲ್ಲಿ: ಪ್ರಧಾನಿ ಮೋದಿ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ಗಾಂಧಿನಗರದಿಂದ: ಅಮಿತ್ ಷಾ ಕೂಡ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
  • ಬೆಂಗಳೂರು ಗ್ರಾಮಾಂತರದಿಂದ: ಡಿಕೆ ಸುರೇಶ ಗೆಲುವು ಸಾಧಿಸಿದ್ದಾರೆ.
  • ಹಾಸನದಿಂದ: ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ.
  • ಉಡುಪಿ ಚಿಕ್ಕಮಗಳೂರು ಶೋಭಾ ಕರಂದ್ಲಾಜೆ ಗೆಲುವು.
  • ಶಿವಮೊಗ್ಗದಲ್ಲಿ: ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.
  • ಉತ್ತರ ಕನ್ನಡದಿಂದ ಅನಂತಕುಮಾರ ಹೆಗಡೆ ಗೆಲುವು. ಸಾಧಿಸಿ ಬಜೆಪಿ ಮುನ್ನಡೆಯಲ್ಲಿದೆ.