ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
152

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಮೂಲಕ ಸೆಪ್ಟೆಂಬರ್ 19,2019ರೊಳಗೆ ಅರ್ಜಿ ಸಲ್ಲಿಸಬಹುದು.


Also read: ಭಾರತೀಯ ಸೇನೆ ಸಿಪಾಯಿ ಫಾರ್ಮಾ ವಿಭಾಗದಲ್ಲಿನ ಸೈನಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಸಹಾಯಕ ವ್ಯವಸ್ಥಾಪಕರು (ಎ.ಹೆಚ್‌ /ಎ.ಐ)
  • ಸಂಸ್ಥೆ (Organisation): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ
  • ವಿದ್ಯಾರ್ಹತೆ (Educational Qualification): ಭಾರತದಲ್ಲಿ ಕನೂನು ರೀತ್ಯಾ ಸ್ಥಾಪಿತವಾಗಿರುವ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ನಿಯತವಾಗಿ ಪಶು ವೈದ್ಯಕೀಯ ವಿಜ್ಞಾನದಲ್ಲಿ ಬಿ.ವಿ.ಎಸ್ಸಿ ಅಥವಾ ಬಿ.ವಿ.ಎಸ್ಸಿ ಮತ್ತು ಎ.ಹೆಚ್ ಪದವಿಧರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
  • ಉದ್ಯೋಗ ಸ್ಥಳ (Job Location): ಮಂಗಳೂರು (ಕರ್ನಾಟಕ)
  • ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲರಿಗೆ ಮತ್ತು ವಿಧವೆಯರಿಗೆ ವಯೋಮಿತಿಯಲ್ಲಿ ಗರಿಷ್ಟ 10 ವರ್ಷಗಳ ಸಡಿಲಿಕೆ ಇರುತ್ತದೆ.


Also read: ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://www.dkmul.com/index.html ಅರ್ಜಿ ನಮೂನೆಯಲ್ಲಿ ಪಡೆದು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿಸ್ಪಷ್ಟವಾಗಿ ಬರೆದು ಅಥವಾ ಬೆರಳಚ್ಚು / ಕಂಪ್ಯೂಟರ್ ಮುದ್ರಣ ಮಾಡಿಸಿ ಅಗತ್ಯವಿರುವ ಎಲ್ಲಾ ದಾಖಲೆಗಳ ಪ್ರತಿಗಳನ್ನು ಸ್ವತಃ ದೃಢೀಕರಿಸಿ ಅರ್ಜಿಯೊಂದಿಗೆ ಕಡ್ಡಾಯವಾಗಿ ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು. ಕಚೇರಿಯ ವಿಳಾಸ: ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ಡೇರಿ ಆವರಣ, ಕುಲಶೇಖರ, ಮಂಗಳೂರು-575005.
  • ಹೆಚ್ಚಿನ ಮಾಹಿತಿಗಾಗಿ: http://www.dkmul.com/index.html ಕ್ಲಿಕ್ ಮಾಡಿ.