ಶ್ರೀ ಲಂಕಾದಲ್ಲಿ ಬಾಂಬ್ ಸ್ಪೋಟ, ಮಂಡ್ಯದಲ್ಲಿ ಹೈ ಅಲರ್ಟ್ ಘೋಷಣೆ; ಕೊಲಂಬೋದಲ್ಲಿ ಬ್ಲಾಸ್ಟ್ ಆದ ಬಾಂಬ್-ಗಳಿಗೂ ಮಂಡ್ಯಕ್ಕೂ ಏನು ಸಂಬಂಧ?? ಈ ಸ್ಟೋರಿ ಓದಿ..

0
486

ಶ್ರೀಲಂಕಾದಲ್ಲಿ ಐಸಿಸ್ ಉಗ್ರರು ಸರಣಿ ಬಾಂಬ್ ದಾಳಿ ನಡೆಸಿದ ದುರಂತದಲ್ಲಿ ಇದುವರೆಗೂ 321 ಮಂದಿ ಬಲಿಯಾಗಿದ್ದು, 500 ಮಂದಿ ಗಾಯಗೊಂಡಿದ್ದಾರೆ. ಈ ದಾಳಿ ಆರು ಕಡೆಯಲ್ಲಿ ನಡೆದಿದ್ದು ಮೂರು ಚರ್ಚ್ ಗಳು ಮೂರು ಫೈ ಸ್ಟಾರ್ ಹೋಟೆಲ್ ಗಳ ಮೇಲೆ ದಾಳಿ ನಡೆದಿದೆ. ಇದರಿಂದ ಭಾರತದ ಹಲವು ಪ್ರವಾಸಿ ತಾಣಗಳ ಮೇಲೆ ಬಿಗಿ ಭದ್ರತೆಯನ್ನು ಇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಉಗ್ರರ ಹಿಟ್ ಲಿಸ್ಟ್​ನಲ್ಲಿರುವ ಜೀವನಾಡಿ ಕನ್ನಂಬಾಡಿ ಕಟ್ಟೆಯ ಸುತ್ತ ಮೂರು ದಿನಗಳಿಂದ ಹದ್ದಿನ ಕಣ್ಣಿಟ್ಟಿದ್ದಾರೆ.

ಹೌದು ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟಗೊಂಡರೆ ಮಂಡ್ಯದಲ್ಲಿ ಯಾಕೆ ಭದ್ರತೆ ಎನ್ನುವ ಪ್ರಶ್ನೆಗಳು ಹುಟ್ಟುತ್ತಿವೆ. ಏಕೆಂದರೆ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಶ್ರೀಲಂಕಾ ದೇಶದಲ್ಲಿ ನಡೆದ ಉಗ್ರರ ಬಾಂಬ್ ದಾಳಿಯಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾ ಪೊಲೀಸರ್ ಹೈ ಅಲರ್ಟ್ ಘೋಷಿಸಿದ್ದಾರೆ. ನಗರದ ರೈಲ್ವೆ ನಿಲ್ದಾಣ, ಚರ್ಚ್ ಸೇರಿ ಪ್ರಮುಖ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಬುಧವಾರ ಪರಿಶೀಲನೆ ನಡೆಸಿದ್ದಾರೆ.

ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾ ಪೊಲೀಸರ್ ಹೈ ಅಲರ್ಟ್ ಘೋಷಿಸಿದ್ದಾರೆ. ಕೆ.ಆರ್.ಎಸ್ ಡ್ಯಾಂಗೂ ಸಾಕಷ್ಟು ಭದ್ರತೆ ಒದಗಿಸಲಾಗಿದೆ. ಎಸ್.ಪಿ. ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ರೈಲ್ವೆ ನಿಲ್ದಾಣಕ್ಕೆ ತೆರಳಿದ ಸಿಬ್ಬಂದಿ ಪ್ರಯಾಣಿಕರ ಲಗೇಜ್​ಗಳು, ಕಸದ ತೊಟ್ಟಿಗಳು, ಅಂಗಡಿ ಮಳಿಗೆಗಳ ಬಳಿಯಿದ್ದ ಬಾಕ್ಸ್​ಗಳನ್ನು ಪರಿಶೀಲಿಸಿದರು. ನಂತರ ಚರ್ಚ್, ಮಸೀದಿ, ದೇವಾಲಯಗಳು ಸೇರಿ ಜನನಿನಿಬಿಡ ಸ್ಥಳಗಳಲ್ಲಿ ತಪಾಸಣೆ ನಡೆಸಿ ಉಗ್ರರ ದಾಳಿಯಿಂದ ಈಗಾಗಲೇ ಇರುವ ಭದ್ರತೆಯನ್ನ ಮತ್ತಷ್ಟು ಚುರುಕುಗೊಳಿಸಲಾಗಿದೆ.
ಮಂಡ್ಯ ನಗರದಲ್ಲಿನ ರೈಲ್ವೆ ನಿಲ್ದಾಣ ಸೇರಿದಂತೆ ಜಿಲ್ಲೆಯ ಬಹುತೇಕ ಬಸ್ ನಿಲ್ದಾಣಗಳಲ್ಲೂ ಸಹ ಪೊಲೀಸರನ್ನ ನಿಯೋಜನೆಗೊಳಿಸಲಾಗಿದೆ. ಅಪರಿಚಿತ ವ್ಯಕ್ತಿಗಳೇನಾದರೂ ಓಡಾಡಿದರೆ ನಿಗಾವಹಿಸಲು ಸೂಚಿಸಲಾಗಿದೆ. ಇದಲ್ಲದೆ ಶ್ರೀರಂಗಪಟ್ಟಣದಲ್ಲಿರುವ ಟಿಪ್ಪುವಿನ ಜಾಮೀಯಾ ಮಸೀದಿ, ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಬಳಿ ಇರುವ ಕಾವೇರಿ ನದಿಯ ಬಲಮುರಿ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲೂ ಪೊಲೀಸರನ್ನ ನಿಯೋಜಿಸಲಾಗಿದೆ. ಇಲ್ಲಿಗೆ ಬರುವ ಪ್ರತಿಯೊಬ್ಬ ಪ್ರವಾಸಿಗರ ಮೇಲೆ ನಿಗಾ ವಹಿಸಲಾಗಿದೆ. ಇದು ಸ್ಥಳೀಯರ ಮೆಚ್ಚುಗೆಗೂ ಪಾತ್ರವಾಗಿದ್ದು, ಇಂತಹ ಸಂದರ್ಭದಲ್ಲಿ ಪೊಲೀಸರ ಈ ಕ್ರಮ ಸರಿಯಾಗಿಯೇ ಇದೆ ಎಂದು ಸ್ಥಳೀಯ ನೀಲಕಂಠ ಹೇಳಿದ್ದಾರೆ.

ನಂತರ ಮಾತನಾಡಿದ ಎಸ್​ಪಿ, ಶ್ರೀಲಂಕಾ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಕೆಆರ್​ಎಸ್​ನಲ್ಲಿ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಭದ್ರತಾ ಮೇಲ್ವಿಚಾರಣೆ ವಹಿಸಿಕೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸರು ಕೂಡ ಹೆಚ್ಚಿನ ನಿಗಾವಹಿಸಿದ್ದಾರೆ. ಅಂತೆಯೇ, ಜಿಲ್ಲೆಯ ಪ್ರವಾಸಿ ತಾಣಗಳಾದ ಶಿಂಷಾ, ಬ್ಲಫ್​, ಪ್ರಮುಖ ದೇವಾಲಯಗಳು ಸೇರಿ ಎಲ್ಲ ಜನನಿಬಿಡ ಸ್ಥಳಗಳ ಮೇಲೆ ನಿಗಾ ವಹಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಿಯೂ ಆತಂಕದ ವಾತಾವರಣ ಇಲ್ಲ ಎಂದು ತಿಳಿಸಿದ್ದಾರೆ.