ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಗ್ರಾಮಲೆಕ್ಕಿಗ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
587

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18,2020ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಮ ಲೆಕ್ಕಿಗ

ಸಂಸ್ಥೆ (Organisation): ಕಂದಾಯ ಇಲಾಖೆ

ಉದ್ಯೋಗ ಸ್ಥಳ (Job Location): ಮಂಡ್ಯ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

ವಯೋಮಿತಿ: ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ: ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,400/- ರಿಂದ 42,000/-ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ವರ್ಗ, 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಏಪ್ರಿಲ್ 22,2020ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಮಂಡ್ಯ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://mandya.nic.in/en/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.