‘ಮಾಸ್ತಿ ಗುಡಿ’ ಚಿತ್ರ ತಂಡದ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ ಆರು ಮಂದಿ ವಿರುದ್ಧ ಚಾರ್ಜ್ ಶೀಟ್…!

0
479

ಮಾಗಡಿ: ಕನ್ನಡ ಚಿತ್ರರಂಗದ ಇಬ್ಬರು ಖಳನಟರನ್ನು ಬಲಿ ಪಡೆದ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ ಆರು ಮಂದಿ ವಿರುದ್ಧ ಗುರುವಾರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

 

ಮಾಸ್ತಿ ಗುಡಿ’ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಲಸಮಾಧಿಯಾದ ಖಳನಟರಾದ ಉದಯ್ ಮತ್ತು ಅನಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸರು ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಸುಮಾರು 400 ಪುಟಗಳ ಚಾರ್ಜ್ ಶೀಟ್ ಅನ್ನು ಇಂದು ಮಾಗಡಿಯ ಜೆಎಂಎಫ್ ಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ.

 

ಪ್ರಕರಣದಲ್ಲಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ಪ್ರಮುಖ ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಎರಡನೇ ಆರೋಪಿ, ಸಹ ನಿರ್ದೇಶಕ ಮೂರನೇ ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಲಾಗಿದೆ.

 

ಕಳೆದ ವರ್ಷ ನವೆಂಬರ್ ನಲ್ಲಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿದ್ದ ವೇಳೆ ದುನಿಯಾ ವಿಜಯ್. ಅನಿಲ್ ಹಾಗೂ ಉದಯ್ ಮೂವರು ಹೆಲಿಕಾಪ್ಟರ್ ನಿಂದ ಕೆರೆಗೆ ಜಿಗಿಯುತ್ತಾರೆ. ಇವರಲ್ಲಿ ದುನಿಯಾ ವಿಜಯ್ ಈಜಿದ್ದು ಅವರನ್ನು ತೆಪ್ಪದ ಮೂಲಕ ದಡಕ್ಕೆ ಕರೆತರಲಾಗಿತ್ತು. ಆದರೆ ಅನಿಲ್ ಮತ್ತು ಉದಯ್ ಈಜಲು ಬರದೇ ನೀರು ಪಾಲಾಗಿದ್ದರು.