ರಾಸಲೀಲೆ ಸಿಡಿ ಬಯಲು! ಸಚಿವ ಸ್ಥಾನಕ್ಕೆ ಎಚ್.ವೈ. ಮೇಟಿ ರಾಜಿನಾಮೆ

0
894

ಬೆಂಗಳೂರು:ಅತ್ಯಾಚಾರ ಆರೋಪ ಪ್ರಕರಣದಲ್ಲಿ ಈ ಹಿಂದೆ ಹರತಾಳು ಹಾಲಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಘಟನೆ ಎಲ್ಲರಿಗೂ ನೆನಪಿದೆ. ಇದೀಗ ಕಾಂಗ್ರೆಸ್ ಸರ್ಕಾರದ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣದ ಸಿಡಿ ಕೊನೆಗೂ ಬಯಲಾಗಿದೆ.

ಕೊನೆಗೂ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಬುಧವಾರ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ಹಿಂದೆ ತಮ್ಮ ವಿರುದ್ಧದ ರಾಸಲೀಲೆ ಸಿಡಿ ಬಿಡುಗಡೆಯಾದರೆ, ತಾನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮೇಟಿ ಹೇಳಿದ್ದರು. ಅದರಂತೆ ಈಗ ಸಿಡಿ ಬಿಡುಗಡೆಯಾಗುತ್ತಿದ್ದಂತೆ ಮೇಟಿ ಅವರು ರಾಜಿನಾಮೆ ಪತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ, ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮೇಟಿ ಅವರಿಗೆ ಸೂಚಿಸಿದ್ದು, ಸಿಎಂ ಸೂಚನೆಯಂತೆ ರಾಜಿನಾಮೆ ನೀಡಿದ್ದಾರೆ.

ಮೇಟಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ. ಆರ್ ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ 3ನಿಮಿಷ 23 ಸೆಕೆಂಡ್ ವಿಡಿಯೋ ಇರುವ ಸಿಡಿಯನ್ನು ರಿಲೀಸ್ ಮಾಡಿದ್ದರು ಎಂದು ಮಾಧ್ಯಮದ ವರದಿ ತಿಳಿಸಿವೆ. ರಾಸಲೀಲೆ ಸಿಡಿಯೇ ಇಲ್ಲ ಎಂದು ವಾದಿಸಿದ್ದ ಮೇಟಿ ರಾಸಲೀಲೆ ಈಗ ಬಟಾಬಯಲಾಗಿದೆ. ಸಿಡಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಎಚ್.ವೈ.ಮೇಟಿ ಸಿಎಂ ಗೃಹಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.