#MeToo ಅಭಿಯಾನ: ಲೈಂಗಿಕ ಕಿರುಕುಳದ ಗಂಭೀರ ಆರೋಪ ಎದುರಿಸುತ್ತಿರುವ ಕೇಂದ್ರ ಮಂತ್ರಿ ಎಂ.ಜೆ.ಅಕ್ಬರ್-ರವರಿಂದ ಮೋದಿ ರಾಜಿನಾಮೆ ಕೇಳಬೇಕಲ್ಲವೇ??

0
234

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ. ಅಕ್ಬರ್ ರಾಜೀನಾಮೆ ನೀಡಿರುವುದಾಗಿ ಖಚಿತಪಡಿಸಲಾರದ ಮೂಲಗಳನ್ನು ಉಲ್ಲೇಖಿಸಿ ಕೆಲವು ಸುದ್ದಿವಾಹಿನಿಗಳು ವರದಿ ಮಾಡಿವೆ. ಆದರೆ, ಅಕ್ಬರ್ ಅವರ ರಾಜೀನಾಮೆ ಕುರಿತ ವರದಿಗಳಿಗೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ರೀತಿಯ ಅಧಿಕೃತ ಸ್ಪಷ್ಟನೆಗಳನ್ನು ನೀಡಿಲ್ಲ. ಆದರೆ, ಅಕ್ಬರ್‌ ಅವರು ಪ್ರಧಾನ ಮಂತ್ರಿಗಳ ಮುಖ್ಯ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಇತ್ತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿಗೆ ಸಮಯ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.


Also read: ನೀವು ಒಂದು ಸರ್ಜಿಕಲ್ ಸ್ಟ್ರೈಕ್ ಮಾಡಿದರೆ, ನಾವು 10 ಅಂತಹ ದಾಳಿ ಮಾಡುತ್ತೀವಿ; ಭಾರತಕ್ಕೆ ಪಾಕ್-ನ ಎಚ್ಚರಿಕೆ!!

ಎಂ.ಜೆ. ಅಕ್ಬರ್ ವಿರುದ್ಧ ಹಲವು ಪತ್ರಕರ್ತೆಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮೀ ಟೂ ಅಭಿಯಾನದಲ್ಲಿ ಸಚಿವರ ವಿರುದ್ಧ ಆರೋಪ ಮಾಡಲಾಗಿತ್ತು. ನಂತರ ಸಚಿವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಅಕ್ಬರ್ ಅವರು ಪ್ರಧಾನಮಂತ್ರಿಗಳಿಗೆ ಇಮೇಲ್ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಧಾನಮಂತ್ರಿಗಳ ಕಚೇರಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎಂದು ವರದಿಗಳು ತಿಳಿಸಿದ್ದವು. ನೈಜೀರಿಯಾ ಪ್ರವಾಸದಲ್ಲಿದ್ದ ಅಕ್ಬರ್ ಇಂದು ಬೆಳಿಗ್ಗೆ ವಾಪಸಾಗಿದ್ದಾರೆ.


Also read: ಚತ್ತೀಸ್ಘಡದಲ್ಲಿ ಚುನಾವಣೆಗೂ ಮುಂಚೆಯೇ ಆಪರೇಷನ್ ಕಮಲ ನಡೆದು ಹೋಯಿತೇ??

ಈ ನಡುವೆ, ಅಕ್ಬರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇವರು ಸಚಿವ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಯಾವ ಖಾತರಿಯೂ ಇಲ್ಲ. ಆದರೆ ಪ್ರಧಾನಿ  ನರೇಂದ್ರ ಮೋದಿ ಅವರು ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ಈ ಹಿಂದೆ ತಿಳಿಸಿತ್ತು. ಅಕ್ಬರ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಮೀ ಟೂ ಅಭಿಯಾನದ ಮೂಲಕ ಕೇಳಿ ಬಂದ ಲೈಂಗಿಕ ಕಿರುಕುಳದ ಆರೋಪದ ಸತ್ಯಾಸತ್ಯತೆಯನ್ನು ಪರಿಶೀಲಿಸಲಿದ್ದೇವೆ ಎಂದು ಹೇಳಿದ್ದರು.


Also read: ರಾಹುಲ್ ಗಾಂಧಿ ಎಚ್.ಎ.ಎಲ್. ಸಂಸ್ಥೆಯ ಉಳಿವಿಗಿ ಮಾಡ್ತಿರೋ ಕೆಲಸಗಳನ್ನು ನೋಡಿದ್ರೆ ಗೊತ್ತಾಗುತ್ತೆ ಅವರಲ್ಲಿ ಎಷ್ಟು ಪ್ರಬುದ್ದತೆ ಬಂದಿದೆ ಅಂತ…

ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ಪತ್ರಕರ್ತೆ ಪ್ರಿಯಾ ರಮಣಿ ಅವರು ವೋಗ್‌ ಇಂಡಿಯಾದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲೇಖನವೊಂದನ್ನು ಬರೆದಿದ್ದರು. ಆದರೆ, ಅದರಲ್ಲಿ ಎಲ್ಲಿಯೂ ಅಕ್ಬರ್ ಹೆಸರನ್ನು ಉಲ್ಲೇಖಿಸಿರಲಿಲ್ಲ. ಇತ್ತೀಚೆಗೆ ಟ್ವೀಟ್ ಮಾಡಿದ್ದ ಅವರು,  ‘ಎಂಜೆ ಅಕ್ಬರ್ ಕತೆಯೊಂದಿಗೆ ಇದನ್ನು ಆರಂಭಿಸುತ್ತೇನೆ. ಆದರೆ ಅವರ ಹೆಸರನ್ನು ಉಲ್ಲೇಖಿಸಿಲ್ಲ; ಯಾಕೆಂದರೆ ಅವರೇನೂ ‘ಮಾಡಿಲ್ಲ’. ಈ ಬೇಟೆಗಾರನಿಂದ ಅನೇಕ ಮಹಿಳೆಯರಿಗೆ ಕೆಟ್ಟ ಅನುಭವ ಆಗಿರಬಹುದು. ಬಹುಶಃ ಅವರದನ್ನು ಹಂಚಿಕೊಳ್ಳಬಹುದು’ ಎಂದು ಬರೆದಿದ್ದರು. ಇದಾದ ನಂತರ ಹಲವು ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಇದರಂತೆ ಅಕ್ಬರ್ ವಿರುದ್ಧ 13 ಆರೋಪಗಳೂ ಕೂಡ ಕೇಳಿಬಂದಿದ್ದವು.