ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
128

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 552 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅಸಕ್ತರು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 10,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ (ಎಮ್‌.ಎಲ್‌.ಎಚ್‌.ಪಿ)
  • ಸಂಸ್ಥೆ (Organisation): ರಾಷ್ಟ್ರೀಯ ಆರೋಗ್ಯ ಅಭಿಯಾನ
  • ಉದ್ಯೋಗ ಸ್ಥಳ (Job Location): ಕರ್ನಾಟಕ
  • ವಿದ್ಯಾರ್ಹತೆ (Educational Qualification): ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್‌.ಸಿ/ಐ.ಎನ್‌.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್10,2019
  • ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: ಡಿಸೆಂಬರ್ 21,2019
  • ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: ಡಿಸೆಂಬರ್ 26,2019
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲು ಅಧಿಕೃತ ವೆಬ್‌ಸೈಟ್ https://www.karnataka.gov.in/hfw/nhm/pages/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 10,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.