ವಿಭಿನ್ನ ರೀತಿಯಲ್ಲಿ ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆಗೆ ಮೋದಿ ತಯಾರಿ; ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ ಮಾಡುವಂತೆ ಸಂಸದರಿಗೆ ಮೋದಿ ಸೂಚನೆ..

0
39

ದೇಶದ ಹೆಮ್ಮೆಯ ಪ್ರಧಾನಿ ಎನ್ನುವ ಪಟ್ಟಕ್ಕೆ ಏರಿದ ನರೇಂದ್ರ ಮೋದಿಯವರು ಹೊಸ ಹೊಸ ಯೋಜನೆಗಳು ಮತ್ತು ಮಾದರಿಯ ಕೆಲಸಗಳನ್ನು ಮಾಡುತ್ತಾ ಜಗತ್ತಿನ್ಯಾದಂತ ಗಮನ ಸೆಳೆಯುತ್ತಿದ್ದಾರೆ. ಇಂತಹ ಮತ್ತೊಂದು ಕೆಲಸಕ್ಕೆ ಪ್ರಧಾನಿಯವರು ತಮ್ಮ ಪಕ್ಷದ ಸದ್ಯಸ್ಯರಿಗೆ ತಿಳಿಸಿದ್ದು, ಮಹಾತ್ಮಾ ಗಾಂಧಿಯವರ 150ನೇ ಜಯಂತಿ ಆಚರಣೆ ವೇಳೆ ಎಲ್ಲಾ ಬಿಜೆಪಿ ಸಂಸದರೂ ತಮ್ಮ ತಮ್ಮ ಕ್ಷೇತ್ರದಲ್ಲಿ 150 ಕಿ.ಮೀ ಪಾದಯಾತ್ರೆ ಮಾಡಬೇಕೆಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.

Also read: ಭಾರತ- ಬಾಂಗ್ಲಾ ಗಡಿಯಲ್ಲಿ ಗೋ ಸಾಗಣಿಕೆಗೆ ಕಳ್ಳರ ಮಾಸ್ಟರ್ ಮೈಂಡ್; ನದಿಯಲ್ಲಿ ಧನಗಳನ್ನ ಸಾಗಿಸುವುದ್ದನ್ನು ಕಂಡು ಬೆಚ್ಚಿಬಿದ್ದ ಯೋಧರ ವಿಡಿಯೋ ವೈರಲ್..

ಹೌದು ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ‘ಗಾಂಧಿ 150’ ಕಾರ್ಯಕ್ರಮದ ಅಂಗವಾಗಿ ಪಾದಯಾತ್ರೆ ಮಾಡುವಂತೆ ಈ ಸೂಚನೆ ನೀಡಿದ್ದಾರೆ. ಮಹಾತ್ಮ ಗಾಂಧಿ ಅವರ 150 ಜನ್ಮ ಜಯಂತಿ ಅತ್ಯಂತ ಪ್ರಮುಖ ಕಾರ್ಯಕ್ರಮವಾಗಿದ್ದು, ಅ.2 ಹಾಗೂ ಅ.31 ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅ.2ರಿಂದ 31ರ ನಡುವೆ ಪ್ರತಿ ದಿನ 15 ಕಿ.ಮೀ. ಪಾದಯಾತ್ರೆ ಮೂಲಕ ಕ್ರಮಿಸುವಂತೆ ಎಲ್ಲ ಸಂಸದರಿಗೂ ಸೂಚಿಸಿದ್ದಾರೆ. ಅಲ್ಲದೆ, ರಾಜ್ಯಸಭಾ ಸದಸ್ಯರೂ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದು, ಪಕ್ಷ ಸಂಘಟನೆ ದುರ್ಬಲ ಇರುವ ಕಡೆ ಪಾದಯಾತ್ರೆ ನಡೆಸುವಂತೆ ಸೂಚಿಸಿದ್ದಾರೆ.

Also read: ಮಸೀದಿಯಲ್ಲಿ ಮುಸ್ಲಿಂ ಮಹಿಳೆಯರ ಪ್ರವೇಶ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್; ಅರ್ಜಿದಾರನಿಗೆ ನೀನು ಯಾರು? ಎಂದು ಪ್ರಶ್ನಿಸಿದ ನ್ಯಾಯಪೀಠ..

ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿಂದು ಬಿಜೆಪಿ ಸಂಸದೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯರಿಗೆ ಕ್ಷೇತ್ರವನ್ನು ಹಂಚಿಕೆ ಮಾಡಲಾಗುವುದು. ಪ್ರತಿಯೊಂದು ಕ್ಷೇತ್ರದಲ್ಲೂ ಕನಿಷ್ಠ 15ರಿಂದ 20 ತಂಡಗಳನ್ನು ರಚಿಸಬೇಕು. ಅವರ ನೇತೃತ್ವದಲ್ಲಿ ಪ್ರತಿದಿನ 15 ಕಿಲೋ ಮೀಟರ್ ಪಾದಯಾತ್ರೆ ನಡೆಸಬೇಕು. ಗಾಂಧೀಜಿ ಅವರ ಸ್ವಾತಂತ್ರ್ಯ ಹೋರಾಟ ಹಾಗೂ ಸಸಿ ನಡೆಯುವ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಮೋದಿ ಸಭೆಯಲ್ಲಿ ಹೇಳಿದ್ದಾರೆ.

Also read: ಸ್ಲಂನಲ್ಲಿ, ಸುಗಂಧದ ಪರಿಮಳ ಬರಬೇಕು, ದುರ್ವಾಸನೆ ಆಗೊಲ್ಲ ಎಂದರೆ ಹೇಗೆ? ಮೈತ್ರಿ ಸರ್ಕಾರದ ನಡೆಗೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ..

ಇದೇ ವೇಳೆ ಮಾತನಾಡಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ, ಹಳ್ಳಿಗಳ ಪುನರ್‍ಜೀವನ ಮತ್ತು ಸ್ವಾವಲಂಬಿಗಳನ್ನಾಗಿ ಮಾಡುವುದು. ಗಿಡ ನೆಡುವುದು ಹಾಗೂ ಶೂನ್ಯ ಬಜೆಟ್ ಕೃಷಿಯತ್ತ ಗಮನಹರಿಸುವಂತೆ ತಿಳುವಳಿಕೆ ನೀಡುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ನಾವು ‘ಸಂಕಲ್ಪ ಪತ್ರ’ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಭವಿಷ್ಯದ ಗುರಿಯಾಗಬೇಕೆ. ಪ್ರತಿ ದಿನ 15 ಕಿ.ಮೀ.ಪಾದಯಾತ್ರೆ ಮಾಡುವುದರಿಂದ ಎಲ್ಲ ಬೂತ್‍ಗಳನ್ನು ಕವರ್ ಮಾಡಬಹುದು. ಇದೇ ಅವಕಾಶವನ್ನು ಬಳಸಿಕೊಂಡು ಸಂಸದರು ಮಹಾತ್ಮಾ ಗಾಂಧಿ ಅವರ ಸಂದೇಶ, ಸಿದ್ಧಾಂತ ಹಾಗೂ ಜೀವನದ ಕುರಿತು ವಿವರಿಸಿ ಎಂದು ತಿಳಿಸಿದ್ದಾರೆ.

ಬಜೆಟ್ ನ ಉತ್ತಮ ಅಂಶಗಳನ್ನು ಜನರಿಗೆ ತಲುಪಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ. ಮಹಾತ್ಮ ಗಾಂಧಿ ಅವರ ಸಂದೇಶಗಳನ್ನು ಹರಡಲು ಅವರ 150 ನೇ ಜನ್ಮಾಚರಣೆ ಕಾರ್ಯಕ್ರಮವನ್ನು ಒಂದು ಸದಾವಶಕಾಶವಾಗಿದೆ ಎಂದು ಹೇಳಿದ್ದಾರೆ.