ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳನ್ನು ಭರ್ತಿಮಾಡಲು ನೇಮಕಾತಿ ಪ್ರಕಟಣೆ..

0
342

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಆಗಸ್ಟ್ 29,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಹೆಚ್‌ಪಿಸಿಎಲ್‌ ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಲಿನಕ್ಸ್ ಸಿಸ್ಟಮ್ ಅಡ್ಮಿನಿಸ್ಟ್ರೇಟರ್, ಹೆಲ್ಪ್ ಡೆಸ್ಕ್,ಸಾಫ್ಟ್‌ವೇರ್ ಅಪ್ಲಿಕೇಶನ್ ಸಪೋರ್ಟ್,

ಸಂಸ್ಥೆ (Organisation): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿ.ಇ / ಬಿ.ಟೆಕ್ / ಎಂಸಿಎ /ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್‌ನಿಂದ ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು.

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): August 29, 2019

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಗೆಳನ್ನು ddehospital-hfws@karnataka.gov.in ವಿಳಾಸಕ್ಕೆ ಆಗಸ್ಟ್ 29,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.