ಕರ್ನಾಟಕ ರಾಜ್ಯಕ್ಕೆ ನೀರು ಹರಿಸಲು ಒಪ್ಪಿಗೆ ನೀಡಿದ ಮಹಾರಾಷ್ಟ್ರದ ಸಿಎಂಗೆ ನೀರು ಬಿಡುಗಡೆ ಮಾಡಬಾರದು ಎಂದು ಪತ್ರ ಬರೆದು ನೀಚತನ ತೋರಿಸಿದ ಶಾಸಕ..

0
694

ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು. ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕರ್ನಾಟಕಕ್ಕೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ಸೂಚಿಸಿತ್ತು, ಇನ್ನೇನು ಎರಡು ದಿನಗಳಲ್ಲಿ ನೀರು ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಇತ್ತು ಆದರೆ ಇದಕ್ಕೆ ಕಲ್ಲು ಹಾಕಲು ಮುಂದಾದ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ ಕೃಷ್ಣಾ ನದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಮಾಡದಂತೆ ಮಹಾರಾಷ್ಟದ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದು ತಮ್ಮ ನೀಚತನ ತೋರಿಸಿದ್ದಾರೆ.

Also read: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ, ಸಿ.ಎಂ. ವಿಶ್ರಾಂತಿಗಾಗಿ ದುಬಾರಿ ರೆಸಾರ್ಟ್-ನಲ್ಲಿ ಲಕ್ಷಾಂತರ ರುಪಾಯಿ ಖರ್ಚು ಮಾಡುತ್ತಿರುವುದು ನೈತಿಕತೆಯೇ??

ಹೌದು ಕೃಷ್ಣಾ ನದಿ ನೀರನ್ನು ಅವಲಂಬಿಸಿರುವ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಜನರು ಪ್ರತಿ ಬೇಸಿಗೆಯಲ್ಲಿ ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರ ಜೊತೆಗೆ ಒಪ್ಪಂದ ಮಾಡಿಕೊಳ್ಳಲಿದೆ. ಮಹಾರಾಷ್ಟ್ರ ಸರ್ಕಾರದ ನೀರಿಗಾಗಿ ನೀರು ಎಂಬ ಪ್ರಸ್ತಾವನೆಯಡಿ ಎರಡೂ ಸರ್ಕಾರಗಳು ನೀರಿನ ಒಪ್ಪಂದ ಮಾಡಿಕೊಳ್ಳಲಿವೆ ಎಂದು ನೀರಾವರಿ ಖಾತೆ ಸಚಿವ ಡಿ ಕೆ ಶಿವಕುಮಾರ್ ತಿಳಿಸಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಮುಖ್ಯ ಎಂಜಿನಿಯರ್ ಗಳ ಸಭೆಯನ್ನು ಪ್ರತಿವರ್ಷ 4 ಟಿಎಂಸಿ ನೀರನ್ನು ವಿನಿಮಯ ಮಾಡಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಪ್ರಸ್ತಾವನೆಯನ್ನು ಮುಂದಿಟ್ಟಿದೆ.

ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಚಿಕ್ಕೋಡಿ, ಬಾಗಲಕೋಟೆ ಮತ್ತು ವಿಜಯಪುರಗಳಿಗೆ ನೀರು ಹರಿಸಲಿದ್ದು ಅದಕ್ಕೆ ಪ್ರತಿಯಾಗಿ ಕರ್ನಾಟಕ ಆಲಮಟ್ಟಿ ಅಣೆಕಟ್ಟೆಯಿಂದ ಮಹಾರಾಷ್ಟ್ರದ ಸೋಲಾಪುರ ಮತ್ತು ಜಾಟ್ ಪ್ರದೇಶಕ್ಕೆ 4 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು ಎಂಬ ಮಾತುಕತೆಯಾಗಿ ಒಪ್ಪಂದ ಕೂಡ ಆಗಿತ್ತು. ಆದರೆ ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿರುವ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ ಕೃಷ್ಣಾ ನದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಮಾಡದಂತೆ ಪತ್ರ ಬರೆದು ಪಾಪಿತನ ಪ್ರದರ್ಶನ ಮಾಡಿದ್ದಾರೆ.

ಮಾಹಾರಾಷ್ಟ ಕೃಷ್ಣಾ ನದಿಗೆ ನೀರು?

ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ.ಮೇ 5 ರಂದು ಸಿಎಂ ಕುಮಾರಸ್ವಾಮಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ. ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಪ್ರತಿವರ್ಷವೂ ಕೂಡ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ನೀರಿನ ಅಭಾವ ಕಂಡು ಬರುತ್ತಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುತ್ತದೆ. ಇದಕ್ಕೆ ಶಾಶ್ವತವಾಗಿ ಪರಿಹಾರ ಕಂಡು ಕೊಳ್ಳಲು, ಮುಂದಾದ ಸರ್ಕಾರ ಮಹಾರಾಷ್ಟ್ರದ ನೆರವನ್ನು ಕೋರಿದೆ ಇದನ್ನು ಸಹಿಸಲಾಗದ ಶಾಸಕ ಪತ್ರದ ಮೂಲಕ ನೀರನ್ನು ನಿಲ್ಲಿಸಲು ಮುಂದಾಗಿದ್ದಾನೆ.

Also read: ರೈತರಿಗೆ ಸಿಹಿಸುದ್ದಿ; ಲೋಕಸಭೆ ಚುನಾವಣೆ ಪಲಿತಾಂಶದ ನಂತರ ಸಾಲಮನ್ನಾ ಮೊತ್ತ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸಿಎಂ ಆದೇಶ..