ಮೋದಿಯವರ ಸುಗ್ರೀವಾಜ್ಞೆ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ!! ಎಲ್ಲಾ ಅತ್ಯಾಚರಿಗಳಿಗೆ ಈ ಶಿಕ್ಷೆ ಕೊಡಬೇಕಿತ್ತ??

0
672

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬಂದಿದೆ. ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರದ ಕಠುವಾ ಹಾಗೂ ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸುಗ್ರೀವಾಜ್ಞೆ ಪ್ರಕಾರ, ಎಲ್ಲ ರೀತಿಯ ಅತ್ಯಾಚಾರ ಪ್ರಕರಣಗಳ ತನಿಖೆಗೆ 2 ತಿಂಗಳ ಗಡುವನ್ನು ವಿಧಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು. ಒಂದೊಮ್ಮೆ ಮೇಲ್ಮನವಿಗಳು ಬಂದರೆ ಅದನ್ನು ಆರು ತಿಂಗಳ ಒಳಗೆ ಇತ್ಯರ್ಥಗೊಳಿಸಬೇಕು. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. 16 ವರ್ಷ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಜೀವಾವಧಿ ಶಿಕ್ಷೆ ಶಿಕ್ಷೆ ವಿಧಿಸಲು ಅನುಮತಿ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿಲ್ಲ ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ.

ಇಂಥಾ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ನಿಟ್ಟಿನಲ್ಲಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಗಳಿಂದ ರಕ್ಷಿಸುವ ಪೋಕ್ಸೊ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲಾಗಿದೆ. ಯಾವುದೇ ಗಂಭೀರ ಲೈಂಗಿಕ ಅಪರಾಧಕ್ಕೂ ಗರಿಷ್ಠ ಜೀವನಪೂರ್ತಿ ಜೈಲು ಶಿಕ್ಷೆಯನ್ನಷ್ಟೇ ವಿಧಿಸಬಹುದು. ಕನಿಷ್ಠ ಶಿಕ್ಷೆ ಏಳು ವರ್ಷದ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಕಾಯ್ದೆಯಲ್ಲಿ ಏನೇನ್ ಇದೆ..?

  • 12 ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಕನಿಷ್ಠ 20 ವರ್ಷ ಜೈಲು ಅಥವಾ ಮರಣ ದಂಡನೆ.
  • 12ರಿಂದ 16 ವರ್ಷದೊಳಗಿನ ಮಕ್ಕಳ ಅತ್ಯಾಚಾರಕ್ಕೆ ಈಗಿರುವ 10 ವರ್ಷಗಳ ಕಠಿಣ ಜೈಲು ಶಿಕ್ಷೆ 20 ವರ್ಷಕ್ಕೆ ವಿಸ್ತರಣೆ. ಜೀವಾವಧಿ ಶಿಕ್ಷೆಗೂ ಅವಕಾಶ
  • 16 ವರ್ಷದೊಳಗಿನ ಹೆಣ್ಮಕ್ಕಳ ಸಾಮೂಹಿಕ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ
  • ಮಹಿಳೆಯರ ಅತ್ಯಾಚಾರ ಪ್ರಕರಣದಲ್ಲಿ 7 ವರ್ಷದ ಶಿಕ್ಷೆ 10 ವರ್ಷಕ್ಕೆ ಏರಿಕೆ

  • ಪೊಲೀಸರ ತನಿಖೆಗೆ 60 ದಿನ ಗಡುವು, 2 ತಿಂಗಳಲ್ಲಿ ಕೋರ್ಟ್‌ ವಿಚಾರಣೆ, ಮೇಲ್ಮನವಿ 6 ತಿಂಗಳಲ್ಲಿ ಇತ್ಯರ್ಥ
  • ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಇಲ್ಲ, ಜಾಮೀನು ಅರ್ಜಿ ವಿಚಾರಣೆ ನಡೆಸುವ ಸಂದರ್ಭ ಎದುರಾದರೆ ಕೋರ್ಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮತ್ತು ಸಂತ್ರಸ್ತೆಯ ಪ್ರತಿನಿಧಿಗೆ 15 ದಿನಗಳ ಮೊದಲು ನೋಟಿಸ್‌ ನೀಡಬೇಕು.
  • ಪ್ರಾಸಿಕ್ಯೂಷನ್‌ ಬಲವರ್ಧನೆ, ಹೊಸ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗಳ ಸ್ಥಾಪನೆ. ಪ್ರತಿ ರಾಜ್ಯದಲ್ಲಿ ಅತ್ಯಾಚಾರ ಕೇಸ್‌ಗಳಿಗಾಗಿ ವಿಶೇಷ ಫೊರೆನ್ಸಿಕ್‌ ಲ್ಯಾಬ್‌ ಸ್ಥಾಪನೆ.