ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ 233 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
191

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌) ವಿವಿಧ 233 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ನವೆಂಬರ್ 9,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವಿವಿಧ ಹುದ್ದೆಗಳು

ಸಂಸ್ಥೆ (Organisation): ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್ (ಎಂಆರ್‌ಪಿಎಲ್‌)

ಉದ್ಯೋಗ ಸ್ಥಳ (Job Location): ಮಂಗಳೂರು (ಕರ್ನಾಟಕ)

ವಿದ್ಯಾರ್ಹತೆ (Educational Qualification): ಯಾವುದೇ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ನವೆಂಬರ್ 9,2019ರ ಅನ್ವಯ ಕನಿಷ್ಟ 26 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ಕೌಶಲ್ಯ ಪರೀಕ್ಷೆ,ದೈಹಿಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 9, 2019

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.mrpl.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 9,2019ರ ಸಂಜೆ 6ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://www.mrpl.co.in/ ಕ್ಲಿಕ್ ಮಾಡಿ.