ರಾತ್ರೋ ರಾತ್ರಿ ಬಿಎಸ್‍ವೈ, ಈಶ್ವರಪ್ಪ ಟೀಮ್‍ನಿಂದ ನಾಲ್ವರಿಗೆ ಕೊಕ್

0
517

ರಾತ್ರೋ ರಾತ್ರಿ ಬಿಜೆಪಿ ನಾಯಕರಿಗೆ ಕೋಕ್- ಮುರಳೀಧರ್‍ರಾವ್ ಖಡಕ್ ಆದೇಶ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶನಿವಾರ ರಾತ್ರೋರಾತ್ರಿ ಬಿಗ್‍ಶಾಕ್ ಕೊಟ್ಟಿದೆ. ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಎರಡು ಬಣಗಳಿಗೂ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಬಿಸಿ ಮುಟ್ಟಿಸಿದ್ದಾರೆ.

ರಾಜ್ಯ ಬಿ.ಜೆ.ಪಿ. ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಬಣದಿಂದ ತಲಾ ಇಬ್ಬರಿಗೆ ಕೊಕ್ ನೀಡಲಾಗಿದೆ.

ಈಶ್ವರಪ್ಪ ಬಣದಲ್ಲಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಎಂ.ಬಿ, ಭಾನುಪ್ರಕಾಶ್, ನಿರ್ಮಲ್ ಕುಮಾರ್ ಸುರಾನಾ, ಯಡಿಯೂರಪ್ಪ ಬಣದಲ್ಲಿದ್ದ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಂ.ಪಿರೇಣುಕಾಚಾರ್ಯ, ರಾಜ್ಯ ವಕ್ತಾರ ಗೋ. ಮಧುಸೂದನ್ ಅವರನ್ನು ಕೈ ಬಿಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರಿಷ್ಠರ ಸೂಚನೆಯಂತೆ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಶರ್ ರಾವ್ ಅವರು ಎರಡೂ ಬಣದಿಂದ ತಲಾ ಇಬ್ಬರನ್ನು ಕೈ ಬಿಟ್ಟಿದ್ದಾರೆ. ಇತ್ತೀಚೆಗೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಆದರೆ ಈ ಹುದ್ದೆಗಳಿಗೆ ನಾಯರನ್ನು ಘೋಷಿಸಿಲ್ಲ.

ನಿನ್ನೆ ರಾತ್ರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತುಕತೆ ನಡೆದಿತ್ತು.  ಕೊನೆಗೆ ಯಡಿಯೂರಪ್ಪ-ಈಶ್ವರಪ್ಪ ಕಿತ್ತಾಟ ಕಂಡು ಮುರಳೀಧರ್ ರಾವ್ ಖಡಕ್ ತೀರ್ಮಾನ ಕೈಗೊಂಡು ನಿಮಗಿಂತಾ ಬಿಜೆಪಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಕೈಕಟ್ಟಿ ಕೂತಿಲ್ಲ ಅನ್ನೋ ಎಚ್ಚರಿಕೆ ಕೊಟ್ಟಿದ್ದಾರೆ.