ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಹಲವು ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
133

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನಲ್ಲಿ ಖಾಲಿ ಇರುವ 91 ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 2,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ವಿದ್ಯಾರ್ಹತೆ: ಅಭಿವೃದ್ಧಿ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗ್ರಾಜುಯೇಟ್ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ: ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ ವಿವರ: ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರೂ ವೇತವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾಮುಖ್ಯ ದಿನಾಂಕ:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ : ಸೆಪ್ಟೆಂಬರ್ 14,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 2,2019

ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 2,2019 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.nabard.org/ ಕ್ಲಿಕ್ ಮಾಡಿ.