ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗ್ರೂಪ್ A ಮತ್ತು B ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
486

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಗ್ರೂಪ್ A ಮತ್ತು ಗ್ರೂಪ್ B ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 26,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಬೆಳಗಾವಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ Name Of The Posts): ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಮತ್ತು ಮ್ಯಾನೇಜರ್ ಗ್ರೇಡ್ ಬಿ

ಸಂಸ್ಥೆ (Organisation): ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)

ವಿದ್ಯಾರ್ಹತೆ (Educational Qualification): ಅಸಿಸ್ಟೆಂಟ್ ಮ್ಯಾನೇಜರ್ ಗ್ರೂಪ್ ಎ ಮತ್ತು ಮ್ಯಾನೇಜರ್ ಗ್ರೂಪ್ ಬಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕನಿಷ್ಟ ಪದವಿ ಮತ್ತು ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ / ಸಂಸ್ಥೆಯಿಂದ ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ (Age): ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಮತ್ತು ಈ ಬಗೆಗೆ ಹೆಚ್ಚು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: (Selection Process): ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: (Application Fee): ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1F30hBQFNeggKtTL7uTHU4O1dYfx511yl/view ಕ್ಲಿಕ್ ಮಾಡಿ.