ಸಮುದ್ರ ದಡದಲ್ಲಿ ಕಸ ತೆಗೆಯುವ ಮೂಲಕ ಜನರಿಗೆ ಸ್ವಚ್ಛತೆಯ ಸಂದೇಶ ಸಾರಿದ ಪ್ರಧಾನಿ ಮೋದಿ ಅವರ ವೀಡಿಯೋ ವೈರಲ್.!

0
246

ಸ್ವಚ್ಚ ಭಾರತದ ಕನಸುನು ಕಂಡ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಹುದ್ದೆಯನ್ನು ನಿಭಾಯಿಸುತ ಸ್ವಚ್ಚ ಭಾರತ ಮಾಡಲು ತಾವೇ ಸ್ವತಹ ಕಸ ತೆಗೆದು ಜನರಿಗೆ ಸ್ಪೂರ್ತಿಯಾಗಿದ್ದಾರೆ. ಮೊದಲ ಭಾರಿಗೆ ಸ್ವಚ್ಚ ಭಾರತ ಯೋಜನೆ ಬಂದಾಗ ಪೊರಕೆಯನ್ನು ಹಿಡಿದು ಕಸ ಹೊಡೆದು ಇಡಿ ದೇಶದ ಜನರಿಗೆ ಮಾದರಿಯಾಗಿದ್ದರು, ಅದನ್ನು ಅಷ್ಟಕ್ಕೇ ಬಿಡದೇ ಸಮಯ ಸಿಕ್ಕಿದ್ದಾಗ ಕಸವನ್ನು ತೆಗೆಯುತ್ತಿದ್ದಾರೆ, ಇಂದು ಬೆಳ್ಳಂಬೆಳಗ್ಗೆ ಮಹಾಬಲಿಪುರಂನಲ್ಲಿರುವ ಸಮುದ್ರ ದಡದಲ್ಲಿ ಕಸ ತೆಗೆಯುವ ಕೆಲಸ ಮಾಡುವ ಮೂಲಕ ಜನರಿಗೆ ಸ್ವಚ್ಛತೆಯ ಸಂದೇಶ ಸಾರಿದ್ಧಾರೆ.

ಬೀಚ್‍ನಲ್ಲಿ ಪ್ಲಾಸ್ಟಿಕ್ ಹೆಕ್ಕಿದ ಮೋದಿ

ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ತಮ್ಮ ವಾಯು ವಿಹಾರದ ಸಮಯದಲ್ಲಿ ಮಾಮಲ್ಲಪುರಂ ಸಮುದ್ರ ತೀರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯವನ್ನು ಮಾಡಿದ್ದಾರೆ. ಸ್ವಚ್ಛ ಭಾರತದ ಅಭಿಯಾನಕ್ಕೆ ವಿಶೇಷ ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಬೆಳಗ್ಗೆ ಸುಮಾರು 30 ನಿಮಿಷಗಳ ಕಾಲ ವಾಯು ವಿಹಾರ ಮಾಡಿದರು. ಈ ಸಮಯದಲ್ಲಿ ಬೀಚ್‍ನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು (ಪ್ಲಾಗಿಂಗ್) ಸಂಗ್ರಹಿಸಿದರು.

ಈ ಕುರಿತ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಅವರು, ಸಂಗ್ರಹಿಸಲಾದ ಕಸವನ್ನು ಹೋಟೆಲ್‍ನ ಸಿಬ್ಬಂದಿ ಜಯರಾಜ್ ಅವರಿಗೆ ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕಾರ್ಯವನ್ನು ಮಾಡೋಣ, ಸದೃಡ ದೇಹ, ಆರೋಗ್ಯವನ್ನು ಪಡೆಯೋಣ ಎಂದಿದ್ದಾರೆ. ಪ್ಲಾಗಿಂಗ್ ಎಂದರೆ ವಾಕ್ ಮಾಡುತ್ತಾ ಅಥವಾ ಜಾಗಿಂಗ್ ಮಾಡುತ್ತಾ ರಸ್ತೆಯಲ್ಲಿ ಬಿದ್ದ ಕಸವನ್ನು ಆಯ್ದು ಸ್ವಚ್ಛಗೊಳಿಸುವುದು.

ಮಹಾಬಲಿಪುರಂ ಸಮುದ್ರ ತೀರದಲ್ಲಿ ಮನಸ್ಸಿಗೆ ಆಹ್ಲಾದ ಉಂಟು ಮಾಡುವ ನಡಿಗೆ ಎಂದು ಮೋದಿ ಮತ್ತೊಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಶೀ ಜಿನ್​ಪಿಂಗ್​ ಜೊತೆ ಅನೌಪಚಾರಿಕ ಸಭೆ ನಡೆಸಲು ತಮಿಳುನಾಡಿನ ಮಹಾಬಲಿಪುರಂನಲ್ಲಿ ತೆರಳಿದ್ದಾರೆ. ನಿನ್ನೆ ಒಂದು ಸುತ್ತಿನ ಮಾತುಕತಡೆ ಮುಗಿದಿದ್ದು, ಇಂದು ಕೂಡ ಚರ್ಚೆ ನಡೆಯಲಿದೆ.

ಕೆಲವು ದಿನಗಳ ಹಿಂದೆ ಮಥುರಾದಲ್ಲಿ ಪೌರ ಕಾರ್ಮಿಕ ಮಹಿಳೆಯರೊಂದಿಗೆ ಸೇರಿ ಕಸ ವಿಂಗಡಣೆ ಮಾಡಿದ ಮೋದಿ ಅವರು, ಕಸದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಿಸುವ `ಸ್ವಚ್ಛ ಹೈ ಸೇವಾ’ ಎಂಬ ಅಭಿಯಾನಕ್ಕೆ ಚಾಲನೆ ನೀಡಿದರು. ಇದು ಎಲ್ಲರಲ್ಲೂ ಅಚ್ಚರಿ ತಂದಿತಾದರೂ, ಪ್ಲಾಸ್ಟಿಕ್ ವಸ್ತುಗಳ ನಿಷೇಧದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮುಂದಾಗಿದ್ದುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಮೋದಿ, ಮರು ಬಳಕೆಯಾಗದಂತಹ ಪ್ಲಾಸ್ಟಿಕ್ ಅನ್ನು 2022 ರ ವೇಳೆಗೆ ಸಂಪೂರ್ಣವಾಗಿ ಅಂತ್ಯ ಹಾಡಲು ಸರ್ಕಾರಗಳೊಂದಿಗೆ ಕೈಜೋಡಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈಗ ಮಹಾಬಲಿಪುರಂನಲ್ಲಿರುವ ಸಮುದ್ರ ದಡದಲ್ಲಿ ಕಸ ತೆಗೆಯುವ ಕೆಲಸ ಮಾಡುವ ಮೂಲಕ ಜನರಿಗೆ ಸ್ವಚ್ಛತೆಯ ಸಂದೇಶ ಸಾರಿದ್ಧಾರೆ.