ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (NDRI) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
326

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (NDRI) ಸೀನಿಯರ್ ರಿಸರ್ಚ್ ಫೆಲ್ಲೋ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 12,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: SBI ಭರ್ಜರಿ ನೇಮಕಾತಿ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೀನಿಯರ್ ರಿಸರ್ಚ್ ಫೆಲ್ಲೋ ಮತ್ತು ಸ್ಕಿಲ್ಡ್ ವರ್ಕರ್

ಸಂಸ್ಥೆ (Organisation): ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ)

ವಿದ್ಯಾರ್ಹತೆ (Educational Qualification): ಸೀನಿಯರ್ ರಿಸರ್ಚ್ ಫೆಲೋ ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ಮತ್ತು ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ವಯೋಮಿತಿ: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ 35 ವರ್ಷ ವಯೋಮಿತಿಯೊಳಗಿನ ಪುರುಷ ಅಭ್ಯರ್ಥಿಗಳು ಮತ್ತು 40 ವರ್ಷ ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಮತ್ತು ಸ್ಕಿಲ್ಡ್ ವರ್ಕರ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ)ನ ಅಧಿಕೃತ ವೆಬ್‌ಸೈಟ್‌ http://www.ndri.res.in/ndri/Design/Index.html ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 12.2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ: ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‌ಡಿಆರ್‌ಐ) ದಕ್ಷಿಣ ಪ್ರಾದೇಶಿಕ ನಿಲ್ದಾಣ, ಆಡುಗೋಡಿ, ಹೊಸೂರ್ ರೋಡ್, ಬೆಂಗಳೂರು-560030.