ನಾವು ಹೇಳಿರೋ ರೀತಿಯಲ್ಲಿ ನೀವು KYC ಮಾಡಿಸಲಿಲ್ಲ ಅಂದ್ರೆ ನಿಮಗೆ ಸಿಗುವ ರೇಷನ್ ಸಂಪೂರ್ಣ ಬಂದ್, ತಕ್ಷಣವೇ KYC ಮಾಡಿಸಿ !!

0
1382

ರಾಜ್ಯದಲ್ಲಿ ಪಡಿತರ ವಿತರಣೆಯಿಂದ ಕೋಟಿ ಲೆಕ್ಕದಲ್ಲಿ ಕುಟುಂಬಗಳು ಊಟ ಮಾಡುತ್ತಿದ್ದು, ಇದರಿಂದ ಹಸಿವಿನ ಮಟ್ಟ ತಗ್ಗಿಸಿದೆ. ಆದರೆ ಇಂತಹ ರೇಶನ್ ಕಾರ್ಡ್ ವಿತರಣೆಯಲ್ಲಿ ಕೂಡ ಮೋಸ, ನಕಲಿ ರೇಶನ್ ಕಾರ್ಡ್ ಮಾಫಿಯಾ ನಡೆಯುತ್ತಿದೆ ಎನ್ನುವ ಸುದ್ದಿಗಳು ಕೇಳಿಬರುತ್ತಿವೆ, ಅದರಂತೆ ಹಲವು ಕಾರ್ಡ್-ಗಳು ಕೂಡ ಈಗಾಗಲೇ ಸಿಕ್ಕಿದ್ದು. ಇದನ್ನು ಸುಧಾರಣೆಗೆ ತರಲು ರಾಜ್ಯ ಸರ್ಕಾರ KYC ಎನ್ನುವ ನಿಯಮವನ್ನು ಜಾರಿಗೆ ತಂದಿದ್ದು, ರೇಷನ್ ಕಾರ್ಡ್ ಹೊಂದಿರುವವರು ಜುಲೈ 31ರ ಒಳಗೆ ನಿಮ್ಮ ರೇಷನ್ ಕಾರ್ಡ್ ಕೆವೈಸಿ ಮಾಡಿಸಬೇಕು. ಇಲ್ಲದಿದರೆ ರೇಶನ್ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Also read: ಮತ್ತೆ ಕೇರಳದಲ್ಲಿ ನಿಫಾ ವೈರಸ್ ಪತ್ತೆ; ಕರ್ನಾಟಕದಲ್ಲೂ ಹೆಚ್ಚಿದ ನಿಫಾ ಭೀತಿ- 8 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ..

ಹೌದು ಜುಲೈ 31ರ ಒಳಗೆ ನಿಮ್ಮ ರೇಷನ್ ಕಾರ್ಡ್ ಆಧಾರ್‌ ದೃಢೀಕರಣ (ಇ-ಕೆವೈಸಿ) ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಿಕೊಳ್ಳದವರಿಗೆ ಇಲ್ಲದಿದ್ದರೆ ಆಗಸ್ಟ್‌ನಿಂದ ಪಡಿತರ ನೀಡುವುದನ್ನು ನಿಲ್ಲಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದು, ಇ-ಕೆವೈಸಿ ದೃಢೀಕರಣ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜುಲೈ 31ರೊಳಗೆ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಯಲ್ಲಿ ಹೆಸರು ಇರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ದೃಢೀಕರಣ ಮಾಡಿಸಬೇಕು.

ಏನಿದು ಕೆವೈಸಿ?

Also read: ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದರೆ ಎಚ್ಚರ; ಹಾಲಿ ಇರುವ 200 ರು. ದಂಡದ ಬದಲಾಗಿ 2000 ರು. ದಂಡ ಕಟ್ಟಬೇಕಾಗುತ್ತೆ..

ಆಧಾರ್‌ ದೃಢೀಕರಣದ ಮೂಲಕ ಚಾಲ್ತಿಯಲ್ಲಿ ಇರದ, ಕುಟುಂಬದೊಂದಿಗೆ ವಾಸವಿಲ್ಲದ ಹಾಗೂ ಮೃತರಾದ ಫಲಾನುಭವಿಗಳ ಮಾಹಿತಿಯನ್ನು ಗುರುತಿಸಿ, ಅಂತಹವರನ್ನು ದತ್ತಾಂಶದಿಂದ ತೆಗೆದುಹಾಕಿ ಪಡಿತರ ಕಡಿತ ಮಾಡಲಾಗುವುದೆಂದು ಇಲಾಖೆ ತಿಳಿಸಿದೆ. ಸರ್ಕಾರ ಪ್ರತಿ ಫಲಾನುಭವಿಯ ಆಧಾರ್‌ ದೃಢೀಕರಣಕ್ಕೆ ತಲಾ 5 ರು.ನಂತೆ ಮತ್ತು ಒಂದು ಕುಟುಂಬದಲ್ಲಿ ಎಷ್ಟೇ ಫಲಾನುಭವಿ ಇದ್ದರೂ ಅವರೆಲ್ಲರ ನೋಂದಣಿಗೆ ಗರಿಷ್ಠ 20 ರು.ಗಳಂತೆ ನ್ಯಾಯಬೆಲೆ ಅಂಗಡಿಯವರಿಗೆ ಹಣ ಪಾವತಿಸಲಿದೆ.

ಕೆವೈಸಿ ಪ್ರಯೋಜನ ವೇನು?

APL ಮತ್ತು BPL ಪಡಿತರ ಚೀಟಿ ಹೊಂದಿರುವ 1.24 ಕಾರ್ಡ್ ದಾರರಿದ್ದು , 4,16,54,587 ಫಲಾನುಭವಿಗಳು ಪಡಿತರ ಪಡೆಯುತ್ತಿದ್ದಾರೆ. ಇದರಲ್ಲಿ ಶೇ.99ರಷ್ಟುಫಲಾನುಭವಿಗಳ ಆಧಾರ್‌ ಪಡೆಯಲಾಗಿದೆ. ಆದರೆ, ಆಧಾರ್‌ ನೋಂದಣಿ ಹಾಗೂ ದೃಢೀಕರಣ ಆಗಿಲ್ಲ. ಪಡಿತರ ದತ್ತಾಂಶದಲ್ಲಿ ತಿಳಿಸಿರುವಂತೆ ಒಟ್ಟು ಫಲಾನುಭವಿಗಳ ಸಂಖ್ಯೆಯಲ್ಲಿ ಶೇ.17.07ರಷ್ಟುಫಲಾನುಭವಿಗಳ ಆಧಾರ್‌ ದೃಢೀಕರಣ ಮಾತ್ರ ಆಗಿದೆ. ಈ ಹಿನ್ನೆಲೆಯಲ್ಲಿ ಪಡಿತರ ಸೋರಿಕೆ ತಡೆಯಲು ಇ-ಕೆವೈಸಿ ನೋಂದಣಿ ಆರಂಭಿಸಲಾಗಿದೆ. ಜುಲೈ ಅಂತ್ಯದೊಳಗೆ ನೋಂದಣಿ ಮಾಡಿಸದಿದ್ದರೆ ಅಂತಹ ಫಲಾನುಭವಿಗಳಿಗೆ ಆಗಸ್ಟ್‌ ತಿಂಗಳ ಪಡಿತರ ಸಿಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Also read: ಪ್ರಧಾನಮಂತ್ರಿ ನ್ಯಾಷನಲ್‌ ಡಯಾಲಿಸಿಸ್‌ ಯೋಜನೆಯ ಅಡಿಯಲ್ಲಿ ಇನ್ಮುಂದೆ ಕಿಡ್ನಿ ರೋಗಿಗಳಿಗೆ ಮನೆಯಲ್ಲೇ ಡಯಾಲಿಸಿಸ್..

ಕೆವೈಸಿ ಸೇವೆ ಉಚಿತ?

ಪಡಿತರ ಚೀಟಿದಾರರು ಇ-ಕೆವೈಸಿ ನೋಂದಣಿಗೆ ಯಾವುದೇ ಸೈಬರ್‌ ಕೆಫೆ, ಕಂಪ್ಯೂಟರ್‌ ಸೆಂಟರ್‌ಗಳಿಗೆ ಹೋಗಬೇಕಿಲ್ಲ. ಬದಲಾಗಿ ತಾವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗಳಲ್ಲಿಯೇ ಆಧಾರ್‌ ದೃಢೀಕರಣ ಮಾಡಿಸಬೇಕಾಗುತ್ತದೆ. ಪ್ರತಿಯೊಬ್ಬರೂ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಯಾವುದೇ ನ್ಯಾಯಬೆಲೆ ಅಂಗಡಿಯ ಪಡಿತರ ವಿತರಕರು ಫಲಾನುಭವಿಗಳಿಂದ ಹಣ ಪಡೆದರೆ ಈ ಬಗ್ಗೆ ಸ್ಥಳೀಯ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದಾಗಿದೆ.