ಪ್ಲಾಸ್ಟಿಕ್ ಕರೆನ್ಸಿ ನೋಟುಗಳ ಮುದ್ರಣ ಕೇಂದ್ರ ಸರ್ಕಾರದ ಹೊಸ ಯೋಜನೆ

0
896

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಸ್ಟಿಕ್  ಕರೆನ್ಸಿ ನೋಟುಗಳ ಮುದ್ರಣ ಮಾಡಲು ಸೂಚಿಸಲಾಗಿದೆ, ಕೇಂದ್ರ ಹಣಕಾಸು ಸಚಿವ ಮತ್ತು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ಲಾಸ್ಟಿಕ್ ಕರೆನ್ಸಿ ನೋಟುಗಳನ್ನು ಮುದ್ರಣ ಮಾಡಲು ನಿರ್ಧರಿಸಲಾಗಿದ್ದು, ಈ ನಿಟ್ಟಿನಲ್ಲಿ ವಸ್ತುಗಳನ್ನು ಪಡೆಯುವ ಕೆಲಸ ಆರಂಭಗೊಂಡಿದೆ ಎಂದು ಸರ್ಕಾರ ಶುಕ್ರವಾರ ಸಂಸತ್ತಿಗೆ ತಿಳಿಸಿದೆ.

ಪ್ಲಾಸ್ಟಿಕ್ ಅಥವಾ ಪಾಲಿಮರ್ ತಲಾಧಾರದಿಂದ ಬ್ಯಾಂಕ್ ನೋಟುಗಳನ್ನು ಪ್ರಿಂಟ್ ಮಾಡಲು ನಿರ್ಧರಿಸಲಾಗಿದೆ. ವಸ್ತುಗಳನ್ನು ಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಗೆ ಲಿಖಿತ ಹೇಳಿಕೆಯಲ್ಲಿ ತಿಳಿಸಿದರು. ಕಾಗದದ ಕರೆನ್ಸಿಗೆ ಬದಲಾಗಿ ಪ್ಲಾಸ್ಟಿಕ್ ಕರೆನ್ಸಿಗಳನ್ನು ಮುದ್ರಿಸುವ ಪ್ರಸ್ತಾಪ ಆರ್ ಬಿಐ ನೀಡಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು.

ಈ ಪ್ಲಾಸ್ಟಿಕ್ ನೋಟು ಮುದ್ರಣದ ಯೋಜನೆಯನ್ನು ಮೊದಲೇ ಪ್ಲಾನ್ ಮಾಡಲಾಗಿತ್ತು ಎಂದು  ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.