ಮತ್ತೆ ಹೊಸ ಸಾವಿರ ರೂ ನೋಟ್ ಬಿಡುಗಡೆ ಆಗಿದ್ರೆ ಎರಡು ಸಾವಿರ ನೋಟ್ ಏನ್ ಆಗುತ್ತೆ ಅಂತೀರಾ ಇಲ್ಲಿ ನೋಡಿ..!

0
1064

ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಈ ಹೊಸ ನೋಟುಗಳು ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ ಎಂದು ಹೇಳಿದೆ.

ಮೈಸೂರು ಮತ್ತು ಸಾಲ್ಬೋನಿಯಲ್ಲಿ ಈ ಹೊಸ ನೋಟುಗಳು ವಿಶೇಷ ಭದ್ರತಾ ವೈಶಿಷ್ಟ್ಯಗಳೊಂದಿಗೆ ಮುದ್ರಣವಾಗಲಿದೆ ಎಂದು ವರದಿ ತಿಳಿಸಿದೆ.

ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು. ಮೈಸೂರಿನಲ್ಲಿರುವ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈಗಾಗಲೇ 2000 ರೂ. ನೋಟ್ ಮುದ್ರಣ ಕಾರ್ಯ ಸ್ಥಗಿತಗೊಂಡಿದ್ದು, ಈ ಹಣಕಾಸು ವರ್ಷದಲ್ಲಿ 2 ಸಾವಿರ ರೂ.ನೋಟುಗಳನ್ನು ಮುದ್ರಿಸುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.

2 ಸಾವಿರ ರೂ. ನೋಟುಗಳ ಚಲಾವಣೆ ಹಂತ ಹಂತವಾಗಿ ಕಡಿಮೆ ಮಾಡುತ್ತಿರುವುದರಿಂದ ಜನರ ವ್ಯವಹಾರಕ್ಕೆ ಸಮಸ್ಯೆ ಆಗದೇ ಇರಲು ಮತ್ತು ಚಿಲ್ಲರೆ ಸಮಸ್ಯೆಯನ್ನು ಕಡಿಮೆ ಮಾಡಲು 200 ರೂ. ನೋಟುಗಳನ್ನು ಬಿಡುಗಡೆ ಮಾಡಿದೆ.

500 ರೂ. ಮತ್ತು 1 ಸಾವಿರ ರೂ. ನೋಟು ನಿಷೇಧಗೊಂಡ ಹಿನ್ನೆಲೆಯಲ್ಲಿ ಆರ್‍ಬಿಐ ಸುಮಾರು 7.4 ಲಕ್ಷ ಕೋಟಿ ರೂ. ಮೌಲ್ಯದ 3.7 ಶತಕೋಟಿ 2000 ರೂ. ನೋಟುಗಳನ್ನು ಜುಲೈ ವರೆಗೆ ಮುದ್ರಿಸಿತ್ತು. ಇದು ನೋಟು ನಿಷೇಧವಾಗಿರುವ 1 ಸಾವಿರ ರೂ. ಮುಖಬೆಲೆಯ 6.3 ಶತಕೋಟಿ ನೋಟುಗಳಿಗಿಂತ ಅಧಿಕವಾಗಿದೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 4ರ ವೇಳೆಗೆ ದೇಶದಲ್ಲಿ 17.7 ಲಕ್ಷ ಕೋಟಿ ನೋಟುಗಳು ಚಲಾವಣೆಯಲ್ಲಿದ್ದರೆ, ಜುಲೈ 14ರ ವೇಳೆಗೆ ದೇಶದಲ್ಲಿ 15.22 ಲಕ್ಷ ಕೋಟಿ ನೋಟುಗಳು ಚಲಾವಣೆಯಾಗುತ್ತಿದೆ ಎಂದು ಆರ್‍ಬಿಐ ತಿಳಿಸಿದೆ.

ಆರ್‍ಬಿಐ ಹಂತ ಹಂತವಾಗಿ 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಕಡಿಮೆ ಮಾಡುತ್ತಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ಎಟಿಎಂಗಳಲ್ಲಿ ಈಗ  ಹೆಚ್ಚಾಗಿ 2 ಸಾವಿರ ರೂ. ನೋಟುಗಳ ಬದಲಿಗೆ 500 ರೂ. ನೋಟುಗಳು ಸಿಗುತ್ತಿದೆ.