ಚಿಕ್ಕಮಗಳೂರು ಜಿಲ್ಲೆಯಲ್ಲಿ 228 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ಅರ್ಜಿ ಆಹ್ವಾನ..

0
443

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಪಿಹೆಚ್ ಸಿ-ಯುಹೆಚ್ ಸಿ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಉಪಕೇಂದ್ರಗಳಿಗೆ ಸೇವೆಸಲ್ಲಿಸಲು ಪುರುಷ ಮತ್ತು ಮಹಿಳೆಯರಿಂದ ಖಾಲಿ ಇರುವ 228 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೇಬ್ರವರಿ 6,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name of post): ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ

ಸಂಸ್ಥೆ (Organisation): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿಎಸ್ಸಿ(ನರ್ಸಿಂಗ್/ಪೋಸ್ಟ್ ಬೇಸಿಕ್ ನರ್ಸಿಂಗ್ ವಿದ್ಯಾರ್ಹತೆ/ಅಥವಾ ಸಮಾನ ವಿದ್ಯಾರ್ಹತೆಯನ್ನು
ರಾಜ್ಯ/ಭಾರತೀಯ ನರ್ಸಿಂಗ್/ಎಂಎಸ್ಸಿ(ನರ್ಸಿಂಗ್) ಅನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಉತ್ತೀರ್ಣರಾಗಿರುವುದರ ಜೊತೆಗೆ ಕಮ್ಯುನಿಟಿ ಹೆಲ್ತ್/ಪ್ರೈಮರಿ ಹೆಲ್ತ್ ಕೇರ್ ಅನ್ನು ರಾಜ್ಯ/ಭಾರತೀಯ ನರ್ಸಿಂಗ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಮಾಡಿರಬೇಕು.

ವೇತನದ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ: (Age): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1coToXxS3LqfyucQraOFk2-mQA_M8VrFb/view

Also read: ಎಸ್ ಎಸ್ ಬಿ -ಯಲ್ಲಿ ವಿವಿಧ ಇನ್ಸ್ ಪೆಕ್ಟೆರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..