ರಾಷ್ಟ್ರೀಯ ಆರೋಗ್ಯ ಅಭಿಯಾನ 766 ನರ್ಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
203

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ: ಬೀದರ್, ಕಲಬುರ್ಗಿ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ ವತಿಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ 766 ಎಂ.ಎಲ್‌.ಹೆಚ್‌.ಪಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜುಲೈ 6,2019 ರ ಒಳಗೆ ಅರ್ಜಿ ಆಹ್ವಾನಿಸಿದೆ.

Also read: ರೈಲ್ವೆ ಇಲಾಖೆಯಲ್ಲಿ ಮಹಿಳೆಯರಿಗೆ ಭರ್ಜರಿ ನೇಮಕಾತಿ; ಮಹಿಳೆಯರಿಗೆ 50% ಮೀಸಲಾತಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನರ್ಸ್

ಸಂಸ್ಥೆ (Organisation): ರಾಷ್ಟ್ರೀಯ ಆರೋಗ್ಯ ಅಭಿಯಾನ

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್ / ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ /ಇಂಡಿಯನ್ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಣಿಯಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತಿಯನ್ನು ಹೊಂದಿರಬೇಕು.

ವಯೋಮಿತಿ: (Age): ಸಾಮಾನ್ಯ ವರ್ಗದ 35 ವರ್ಷ , SC/ST CAT-1/ ಮಾಜಿ ಸೈನಿಕ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಹಾಗೂ
ಪ್ರವರ್ಗ-2ಎ/2ಬಿ/3ಎ/3ಬಿ ನ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ ವೇತನ ಜೊತೆಗೆ ಕಾರ್ಯಕ್ಷಮತೆ ಆಧಾರದ ಮೇಲೆ ಪ್ರೋತ್ಸಾಹ ಧನ ರೂ.8000/-ರೂ ವರೆಗೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ (Fee): ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಮಾಜಿ ಸೈನಿಕ (ಪುರುಷ ಮತ್ತು ಮಹಿಳಾ) ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.karnataka.gov.in/hfw/kannada/Pages/home.aspx ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 6,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.