ಮಧ್ಯಮ ಹಂತದ 253 ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
129

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 253 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಬೀದರ್,ಬಳ್ಳಾರಿ ಕೊಪ್ಪಳ,ಯಾದಗಿರಿ,ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖಾಲಿ ಇವೇ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 7,2020ರೊಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ 129 ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ

ಸಂಸ್ಥೆಕ (Organisation): ರಾಷ್ಟ್ರೀಯ ಆರೋಗ್ಯ ಅಭಿಯಾನ

ವಿದ್ಯಾರ್ಹತೆ (Educational Qualification): ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬಿ.ಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ/2ಬಿ/3ಎ ಮತ್ತು 3ಬಿಯ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜನವರಿ 18,2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 7,2020
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: ಫೆಬ್ರವರಿ 15,2020
ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: ಫೆಬ್ರವರಿ 17 ಮತ್ತು 18,2020

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲು ಅಧಿಕೃತ ವೆಬ್‌ಸೈಟ್ https://www.karnataka.gov.in/hfw/nhm/pages/home.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 7,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.