ಕನ್ನಡಿಗರ ಆಕ್ರೋಶಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ; ಕನ್ನಡದಲ್ಲೇ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕೆಂದು ನಿರ್ಮಲಾಸೀತಾರಾಮನ್ ಸೂಚನೆ.!

0
248

ಜುಲೈ 7 ರಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಕನ್ನಡ ಸೇರಿ 45 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿದ್ದು, 90 ಸಾವಿರ ಜನರು ಉದ್ಯೋಗಿಗಳಿದ್ದಾರೆ. ಇವುಗಳಿಗೆ ಆರ್.ಆರ್.ಬಿ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಐಬಿಪಿಎಸ್ ಮೂಲಕ ನೇಮಕಾತಿ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಬ್ಯಾಂಕ್‍ನಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡುವ ನಿಟ್ಟಿನಲ್ಲಿ ಕನ್ನಡ ಸೇರಿದಂತೆ 13 ಸ್ಥಳಿಯ ಭಾಷೆಯಲ್ಲೂ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದ್ದರು.

Also read: ವಾಹನ ಸವಾರರ ವಿರೋಧಕ್ಕೆ ಮಣಿದ ಸರ್ಕಾರ; ತಕ್ಷಣದಿಂದಲೇ ಹಳೆಯ ದಂಡ ವಿಧಿಸಲು ಆದೇಶ..!

ಆದರೆ ಈ ನಿಯಮವನ್ನು ಕೈಬಿಟ್ಟು ರಾಷ್ಟ್ರೀಕೃತ ಬ್ಯಾಂಕುಗಳ 853 ಹುದ್ದೆಗಳಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಜಿಪಿಎಸ್) ಅರ್ಜಿಗಳನ್ನು ಆಹ್ವಾನಿಸಿತ್ತು. ಆಕಾಂಕ್ಷಿಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಹಾಕಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಕರ್ನಾಟಕ ಸೇರಿದಂತೆ ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಬರಹಗಾರರು ಸೇರಿದಂತೆ ಮತ್ತಿತರರು ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕುವ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ದೂರಿದ್ದರು.

Also read: ಖಾಲಿ ಇರುವ 16,838 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ; ಅಭ್ಯರ್ಥಿಗಳು ಇಂದಿನಿಂದಲೇ ಸಜ್ಜಾಗಿ.!

ಇವೆಲ್ಲ ವಿರೋಧಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರಕಾರ ಕನ್ನಡಿಗರ ಹೋರಾಟಕ್ಕೆ ಸ್ಪಂದಿಸಿ ಬ್ಯಾಂಕಿಂಗ್ (IBPS)ಪರೀಕ್ಷೆಯಲ್ಲಿ ಕನ್ನಡ ಸೇರಿ 19 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಈ ಮೂಲಕ ಕನ್ನಡಿಗರ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ 19 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಬ್ಯಾಂಕ್ ಅಧಿಕಾರಿಗಳಿಗೆ ಟ್ವಿಟ್ ಮೂಲಕ ಸೂಚನೆ ಕೊಟ್ಟಿದ್ದಾರೆ.

ಈ ಸಂಬಂಧ ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಕನ್ನಡ ಸೇರಿದಂತೆ 19 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಬೇಡಿ. ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದರು. ಇದೀಗ ಕನ್ನಡಿಗರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕನ್ನಡ ಭಾಷೆಯಲ್ಲೇ ಪರೀಕ್ಷೆ ಬರೆಯುವುದಕ್ಕೆ ಅನುಮತಿ ಕೊಟ್ಟಿದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿ ಹೆಚ್ಚು ಜ್ಞಾನ ಪಡೆದುಕೊಂಡಿರುತ್ತಾರೆ. ಹೀಗಾಗಿ ಪ್ರಾದೇಶಿಕ ಭಾಷೆಯಲ್ಲಿಯೇ ಆರ್.ಆರ್.ಬಿ, ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅದಕ್ಕಾಗಿ ಬಹುದಿನಗಳ ಕನ್ನಡ ಹೋರಾಟಕ್ಕೆ ಜಯ ಸಿಕ್ಕಿದೆ.