ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
193

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ) ನೇಮಕಾತಿ 137 ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ July 17, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಟೆಕ್ನೀಶಿಯನ್

ಸಂಸ್ಥೆ (Organisation): ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್‌ಐಟಿ ಕರ್ನಾಟಕ)

ವಿದ್ಯಾರ್ಹತೆ (Educational Qualification):

ಜ್ಯೂನಿಯರ್ ಅಸಿಸ್ಟೆಂಟ್: 10+2 ವಿದ್ಯಾರ್ಹತೆ, ನಿಮಿಷಕ್ಕೆ 35 ಪದಗಳನ್ನು ಟೈಪ್ ಮಾಡುವ ಅರ್ಹತೆ ಇರಬೇಕು.

ಟೆಕ್ನೀಶಿಯನ್: 10+2 ಅಥವಾ 12ನೇ ತರಗತಿ ಮತ್ತು ಐಟಿಐ ಅಥವಾ ಡಿಪ್ಲೋಮ ವಿದ್ಯಾರ್ಹತೆ

ಸೀನಿಯರ್ ಟೆಕ್ನೀಶಿಯನ್: 10+2 ವಿದ್ಯಾರ್ಹತೆ ಮತ್ತು ನಿಮಿಷಕ್ಕೆ 35 ಪದಗಳನ್ನು ಟೈಪ್ ಮಾಡುವ ಅರ್ಹತೆ.

ಸೀನಿಯರ್ ಅಸಿಸ್ಟೆಂಟ್: 10+2 ವಿದ್ಯಾರ್ಹತೆಯನ್ನು ವಿಜ್ಞಾನ ವಿಭಾಗದಲ್ಲಿ ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು ಸಾಮಾನ್ಯ /ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಎನ್‌ಐಟಿಯ ಅಧಿಕೃತ ವೆಬ್‌ಸೈಟ್‌ https://www.nitk.ac.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 19,2019 ರೊಳಗೆ ಅರ್ಜಿಯನ್ನು ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.nitk.ac.in/ ಕ್ಲಿಕ್ ಮಾಡಿ.