ರಾಜ್ಯದಿಂದ ವಲಸೆ ಹೋಗುವ ಪರಿಶಿಷ್ಟ ಜಾತಿ/ಪಂಗಡದವರಿಗೆ ಇನ್ಮೇಲಿಂದ ಮೀಸಲಾತಿ ಇರೋದಿಲ್ಲ!!

0
440

ಮೀಸಲಾತಿಯ ಸೌಲಭ್ಯವನ್ನು ಪಡೆಯಿವ ದಲಿತರು ಬೇರೊಂದು ರಾಜ್ಯಕ್ಕೆ ವಲಸೆ ಹೋದರೆ ಮೀಸಲಾತಿ ಭಾಗ್ಯ ಇಲ್ಲ. ತಮ್ಮದೇ ರಾಜ್ಯವನ್ನು ತೊರೆದು ಬೇರೊಂದು ರಾಜ್ಯಗಳಿಗಳಲ್ಲಿ ನೆಲೆಸಿ ಸ್ವಂತ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡದ ವ್ಯಕ್ತಿಗಳು ಎಂದು ನೋಂದಣಿಯಾಗಿದ್ದರೆ ಇದನ್ನೇ ಮಾನದಂಡವಾಗಿ ಇಟ್ಟುಕೊಂಡ ಬೇರೆ ರಾಜ್ಯದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೇಳುವಂತಿಲ್ಲ. ಅವರು ನೋಂದಣಿಯಾದ ರಾಜ್ಯದಲ್ಲಿ ಮಾತ್ರ ಮೀಸಲಾತಿ ಸಿಗಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಏನಿದು ಮಿಸಲಾತಿ..?
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ. ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.

ಇಂತಹ ಮೀಸಲಾತಿಯನ್ನು ಪಡೆಯುತ್ತಿರುವ ದಲಿತರಿಗೆ ಬೇರೊಂದು ರಾಜ್ಯದಲ್ಲಿ ಮಿಸಲಾತಿ ಕೊರುತ್ತಿದರು ಇದರ ವಿಚಾರಣೆಗಾಗಿ ನ್ಯಾಯಮೂರ್ತಿ ಎನ್‌.ವಿ.ರಾಮನ್, ಆರ್.ಭಾನುಮತಿ, ಎಂ.ಶಾಂತನಗೌಡರ್ ಮತ್ತು ಎಸ್‌.ಎ.ನಜೀರ್ ಅವರಿದ್ದ ಸಂವಿಧಾನಿಕ ಪೀಠದಲ್ಲಿ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡದ ಮೀಸಲಾತಿ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಯಿತು.
ಈ ವೇಳೆ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ಕುರಿತು ಆದೇಶ ನೀಡಿದೆ. ಉದ್ಯೋಗದ ನಿಮಿತ್ತ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡದ ವ್ಯಕ್ತಿಗಳು ಬೇರೆ ರಾಜ್ಯಕ್ಕೆ ವಲಸೆ ಹೋಗಿದ್ದರೆ, ಅಲ್ಲಿನ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೇಳುವಂತಿಲ್ಲ ಎಂದು ಪೀಠ ತಿಳಿಸಿದೆ.