ನಗರದಲ್ಲಿ ನಿಷೇದಾಜ್ಞೆ ಜಾರಿ ಇರುವುದಿಲ್ಲ. @CPBlr ತಿಳಿಸಿದೆ.

0
938

ಎಲ್ಲೆಡೆ ಕಾವೇರಿಯ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 20ಕ್ಕು ಹೆಚ್ಚು ವಾಹನಗಳಿಗೆ ಬೆಂಕಿಯನ್ನು ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 144ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ಈ ಸುಳ್ಳುಸಿದ್ದಿಯ ವದಂತಿಗಳಿಗೆ ಕಿವಿಗೊಡಬೇಡಿ! ನಗರದಲ್ಲಿ ನಿಷೇದಾಜ್ಞೆ ಜಾರಿ ಇರುವುದಿಲ್ಲ. @CPBlr ತಿಳಿಸಿದೆ.

ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಿಂದ ತಿದ್ದುಪಡಿ ಆಜ್ಞೆ ಹೊರಬೀಳುತ್ತಿದ್ದಂತೆ ಪ್ರತಿಭಟನೆ ತೀವ್ರಗೊಳ್ಳುತ್ತಿದೆ.  ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದ್ದು, ಕನ್ನಡಿಗರಿಗೆ ಸೇರಿದ ಹೋಟೆಲ್, ವಾಹನಗಳ ಮೇಲೆ ದಾಳಿ ಮಾಡಲಾಗಿದೆ. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆ ಖಂಡಿಸಿ ಬೆಂಗಳೂರು ನಗರದಾದ್ಯಂತ ಪ್ರತಿಭಟನೆಯ ಕಿಚ್ಚು ತಾರಕಕ್ಕೇರಿದ್ದು, ಹಲವು ಕನ್ನಡ ಪರ ಸಂಘಟನೆಗಳು ಹಲವಾರು ಅಂಗಡಿನ ಮುಂಗಟ್ಟುಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕನ್ನಡ ಪರ ಸಂಘಟನೆಗಳು  ತಮಿಳುನಾಡಿನ ವಾಹನಗಳನ್ನು ಕಂಡ ಕಂಡಲ್ಲೇ ನಿಲ್ಲಿಸಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಲಾಗ್ತಾ ಇದೆ.

ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಬಟನೆಯ ಕಾವು ಮಿತಿ ಮೀರುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಯಂಡಳ್ಳಿಯಿಂದ ತೆರಳಲಿರುವ ಮೆಟ್ರೋವನ್ನು ನಿಲ್ಲಿಸಲಾಗಿದ್ದು, ಈಗಾಗಲೇ ಮಟ್ರೋ ನಿಲ್ದಾಣಗಳಿಗೆ ಬೀಗ ಜಡಿಯಲಾಗಿದೆ.