ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0
80

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ) ಹಲವು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 11,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: 10ನೇ ತರಗತಿ ಪಾಸಾದವರಿಗೆ ಉತ್ತರ ರೈಲ್ವೆ ಹಲವು ವಿಭಾಗಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಟೆಕ್ನಿಕಲ್ ಅಸಿಸ್ಟೆಂಟ್

ಸಂಸ್ಥೆ (Organisation) ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ)

ವಿದ್ಯಾರ್ಹತೆ (Educational Qualification): ವಿಜ್ಞಾನ ವಿಭಾಗದಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಅಲ್ಲದೆಯೇ ಪದವಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಪೋಸ್ಟ್ ಮೂಲಕ ಅಕ್ಟೋಬರ್ 11,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ: ಸಹಾಯಕ ನಿರ್ದೇಶಕರು, ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ (ಎನ್‌ಟಿಆರ್‌ಒ), ಬ್ಲಾಕ್ III,ಹಳೆ ಜೆಎನ್‌ಯು ಕ್ಯಾಂಪಸ್, ನವದೆಹಲಿ-110067

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/9/advt.pdf