ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಎನ್‌ವೈಕೆಎಸ್ ವಿವಿಧ 225 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
392

ಎಸ್ಎಸ್ಎಲ್ ಸಿ, ಪದವಿ, ಸ್ನಾತಕೋತ್ತರ ಪದವಿ ಮಾಡಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನೆಹರು ಯುವ ಕೇಂದ್ರ ಸಂಘಥನ್ ನೇಮಕಾತಿ 225 ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ , ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಜ್ಯೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ , ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್)

ಸಂಸ್ಥೆ (Organisation): ನೆಹರು ಯುವ ಕೇಂದ್ರ ಸಂಘಥನ್ (ಎನ್‌ವೈಕೆಎಸ್‌)

ವಿದ್ಯಾರ್ಹತೆ (Educational Qualification): ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ,ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್
ಹುದ್ದೆಗಳಿಗೆ ಬಿಕಾಂ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ (Salary Scale): ಜಿಲ್ಲಾ ಯೂಥ್ ಕೋ-ಆರ್ಡಿನೇಟರ್ -ತಿಂಗಳಿಗೆ 56,100/- ರಿಂದ 1,77,500/-ರೂ, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ -ತಿಂಗಳಿಗೆ 25,500/- ರಿಂದ 81,100/-ರೂ ,ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) -ತಿಂಗಳಿಗೆ 18,000 /- ರಿಂದ 56,900/-ರೂ

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಓಬಿಸಿ (ಪುರುಷ) ಅಭ್ಯರ್ಥಿಗಳು 700/-ರೂ ಮತ್ತು ಸಾಮಾನ್ಯ ಓಬಿಸಿ (ಮಹಿಳೆ ) ಅಭ್ಯರ್ಥಿಗಳು 350/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ /ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): March 31, 2019

ಹೆಚ್ಚಿನ ಮಾಹಿತಿಗಾಗಿ: http://nyks.nic.in/ ಕ್ಲಿಕ್ ಮಾಡಿ.