ಮೆದುಳಿನ ಟಾನಿಕ್ ಒಂದೆಲಗ

0
6383

ಒಂದೆಲಗ ಅಥವಾ ಬ್ರಾಹ್ಮಿ ಎಂಬುದಾಗಿಯೂ ಕರೆಯಲ್ಪಡುವ ಈ ಸೊಪ್ಪು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ಒಂದೆಲಗದ ಹಲವಾರು ಬಗೆಯ ಔಷಧಗಳು ಮತ್ತು ಸಿರಪ್ಗಳು ದೊರಕುತ್ತವೆ. ಹಳ್ಳಿಗಳ ತೋಟದಲ್ಲಿ ಅಡಿಕೆ ಮರದ ಬುಡದಲ್ಲಿ ಕಳೆಯಂತೆ ಬೆಳೆದುಕೊಳ್ಳುವ ಈ ಸಸ್ಯವನ್ನು ನಾವು ನಗರಗಳಲ್ಲಿ ಕಾಣುವುದು ಕಷ್ಟ. ಆದರೆ ಪಾಟ್ಗಳಲ್ಲಿಯೂ ಕೂಡ ಇದನ್ನು ಬೆಳೆಸಬಹುದಾಗಿದೆ.

 

1)ಗರ್ಭಿಣಿಯರು ಇದರ ರಸ ತೆಗೆದು ಪ್ರತಿನಿತ್ಯ ಕುಡಿದರೆ ದೇಹಕ್ಕೆ ಒಳ್ಳೆಯದು ಮತ್ತು ಹುಟ್ಟುವ ಮಗುವಿನ ಆರೋಗ್ಯವೂ ಚೆನ್ನಾಗಿರುತ್ತದೆ.

 

2)ಇದು ದೇಹಕ್ಕೆ ತಂಪು ಮತ್ತು ರೋಗನಿರೋಧಕತೆಯನ್ನು ಹೆಚ್ಚಿಸುತ್ತದೆ.

 

3)ಕೆಮ್ಮು, ಉಸಿರಾಟದ ತೊಂದರೆ ಇರುವವರಿಗೆ ಇದರ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ಸೇವಿಸುತ್ತಾರೆ.

 

4)ಒಂದೆಲಗ ಸೇವನೆ ದೇಹಕ್ಕೆ, ಮನಸ್ಸಿಗೆ ತಂಪು ತರುವುದು ಮಾತ್ರವಲ್ಲದೆ ಸ್ಮರಣಶಕ್ತಿಯನ್ನೂ ವರ್ಧಿಸುತ್ತದೆ ಎಂಬ ನಂಬಿಕೆಯಿದೆ.ಇದು ನಿತ್ಯ ತಿಂದರೆ ಬುದ್ಧಿ ಚುರುಕಾಗುತ್ತದೆ.

 

5)ಮಕ್ಕಳಿಗೆ ಬೆಳಗ್ಗೆ ಇದರ ಎರಡೆರಡು ಎಲೆಗಳನ್ನು ತಿನ್ನಲು ಕೊಡುವುದರಿಂದ ಮಕ್ಕಳ ಜ್ಞಾಪಕಶಕ್ತಿ ಹೆಚ್ಚುತ್ತದೆ.

 

6)ದಿನಕ್ಕೆ 4 -5 ಎಲೆ ಸೇವಿಸುವುದರಿಂದ ಮಾತಿನ ಉಗ್ಗುವಿಕೆ ಇಲ್ಲವಾಗುವುದು.ಮಲ ಬದ್ದತೆಯಿಂದ ಬಳಲುವವರು ಒಂದೆಲಗದ ಸೊಪ್ಪಿನಿಂದ ತಯಾರಿಸಿದ ಪಲ್ಯ ಅಥವಾ ಚಟ್ನಿ ಸೇವಿಸುತ್ತಾರೆ.

 

7)ಒಂದೆಲಗದ ರಸಕ್ಕೆ ಕೊಬ್ಬರಿ ಎಣ್ಣೆ ಸೇರಿಸಿ ತಯಾರಿಸಿದ ಎಣ್ಣೆಯಿಂದ ಕೂದಲು ಸೋಂಪಾಗಿ ಬೆಳೆಯುತ್ತದೆ. ಇದರ ತೈಲ ಮಾರುಕಟ್ಟೆಗಳಲ್ಲೂ ಸಿಗುತ್ತದೆ.

 

8)ಇದರ 4-5 ಎಲೆಯನ್ನು ಪ್ರತಿನಿತ್ಯ ಸೇವಿಸುವುದರಿಂದ ರಕ್ತಹೀನತೆಯನ್ನೂ ನಿವಾರಿಸುತ್ತದೆ.

 

9)ದೇಹದ ಉಷ್ಣತೆ ನಿವಾರಿಸಲು ಒಂದೆಲಗದ ತಂಬುಳಿ ದಿವ್ಯೌಷಧ.

 

10)ಕೆಮ್ಮು, ಉಸಿರಾಟದ ತೊಂದರೆ ಇರುವವರು ಇದರ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸುತ್ತಾರೆ.

 

11)ನರರೋಗಗಳಿಗೆ ಇದು ದಿವ್ಯೌಷಧವೆಂದು ಆಯುರ್ವೇದದಲ್ಲಿ ಪರಿಗಣಿಸಿದ್ದಾರೆ.

 

12)ಹಾಲಿನಲ್ಲಿ ಜೀರಿಗೆಪುಡಿ ಹಾಗೂ ಒಣಗಿಸಿ ಪುಡಿಮಾಡಿಟ್ಟುಕೊಂಡ ಒಂದೆಲಗದ ಪುಡಿಯನ್ನು ಬೆರೆಸಿ ಸೇವಿಸಿದರೆ ಬಾಣಂತಿಯರಲ್ಲಿ ಎದೆಹಾಲು ವೃದ್ಧಿಯಾಗುತ್ತದೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.